ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಅಭ್ಯರ್ಥಿ ಡಾ.ಭರತ್ ಶೆಟ್ಟಿ ವೈ
ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಪಾಲಿಕೆ ವ್ಯಾಪ್ತಿಯ ವಾರ್ಡ್ 6ರ ಶ್ರೀ ಗಣೇಶ ಭಜನಾ ಮಂದಿರ ಜನತಾ ಕಾಲನಿ ಗೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.