ಅಭ್ಯರ್ಥಿ ಡಾ.ಭರತ್ ಶೆಟ್ಟಿಯವರಿಂದ ಮತ ಚಲಾವಣೆ
Wednesday, May 10, 2023
ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಹಾಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಪತ್ನಿ ಡಾ. ಆಸವರಿ ಶೆಟ್ಟಿ ಅವರೊಂದಿಗೆ ಕದ್ರಿ ಕೆಪಿಟಿ ಯ ಬೂತ್ ಸಂಖ್ಯೆ 132ರಲ್ಲಿ ಮತ ಚಲಾಯಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ವಿನಂತಿಸಿದರು. ಮಂಗಳೂರು ನಗರ ಉತ್ತರ ಸಹಿತ ಜಿಲ್ಲೆ, ರಾಜ್ಯದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಇದ್ದು, ರಾಜ್ಯದಲ್ಲಿ ಬಿಜೆಪಿ ಸರಕಾರ ಮುಂದುವರೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.