ಗೆಲುವಿನೊಂದಿಗೆ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ
Saturday, May 13, 2023
ಮತಾದರರು ಅತೀ ಹೆಚ್ಚಿನ ಮತಗಳ ಅಂತರದಲ್ಲಿ ನನ್ನನ್ನು ಗೆಲ್ಲಿಸಿದ್ದು, ಅವರಿಗೆ ಆಭಾರಿಯಾಗಿರುತ್ತೇನೆ. ಈ ಗೆಲುವಿನೊಂದಿಗೆ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಇದು ನನ್ನದೊಬ್ಬನ ಗೆಲುವಲ್ಲ. ಕಾರ್ಯಕರ್ತರ, ಮತದಾರರ ಗೆಲುವು. ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಜವಾಬ್ದಾರಿ ನನ್ನ ಮೇಲಿದ್ದು, ಅದನ್ನು ಮುಂದುವರೆಸುತ್ತೇನೆ. ಅಭಿವೃದ್ಧಿ, ಹಿಂದುತ್ವ ಮತ್ತು ರಾಷ್ಟ್ರೀಯತೆ ವಿಚಾರದಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಂಡಿಲ್ಲ. ಕೋವು ಸಾಮರಸ್ಯ ಕಾಪಾಡುವ ರೀತಿಯಲ್ಲಿ ಕೆಲಸ ಮಾಡಲಾಗಿದೆ. ಕಾಂಗ್ರೆಸ್‌ನ ಕಪಟ ನಾಟಕವನ್ನು ಜನರಿಗೆ ತಿಳಿಸಿದ್ದೇವೆ. ಜನರು ಆಶೀರ್ವಾದ ಮಾಡಿದ್ದಾರೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ| ಭರತ್ ಶೆಟ್ಟಿ ವೈ. ಅವರು ಹೇಳಿದರು.