Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಮೂಡುಬಿದಿರೆ ಪೇಟೆಯ ಮತದಾರರೊಂದಿಗೆ ಮತ ಯಾಚನೆ

ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಮೂಡುಬಿದಿರೆ ಪೇಟೆಯ ಮತದಾರರೊಂದಿಗೆ ಮತ ಯಾಚನೆ ನಡೆಸಿದರು. 
ಆಲಂಗಾರಿನಿಂದ ಪಾದಯಾತ್ರೆ ಪ್ರಾರಂಭಿಸಿದ ಅವರು ಜೈನಪೇಟೆ ಮಾರ್ಗವಾಗಿ ಪೇಟೆಯಲ್ಲಿ ಮತ ಯಾಚಿಸಿದರು.
ಈ ಸಂದರ್ಭ  ಮಾಜಿ ಸಚಿವ ಅಭಯಚಂದ್ರ, ಕೆಪಿಸಿಸಿ ಸದಸ್ಯ ಚಂದ್ರಹಾಸ ಸನಿಲ್, ಯುವ ಕಾಂಗ್ರೆಸ್ ಅಧ್ಯಕ್ಷ ಜಯ ಕುಮಾರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪುರಸಭಾ ಸದಸ್ಯರಾದ ಪಿಕೆ ಥೋಮಸ್, ಸುರೇಶ್ ಕೋಟ್ಯಾನ್, ಜೋಸ್ಸಿ ಮಿನೇಜಸ್  ಹಾಗೂ ಕಾರ್ಯಕರ್ತರು ಹಾಜರಿದ್ದರು.