ತೋಕೂರಿನಲ್ಲಿ ನಾಗಮಂಡಲೋತ್ಸವ
Wednesday, May 24, 2023
ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಬ್ರಹ್ಮಕುಂಬಾಭಿಷೇಕದ ಪ್ರಯುಕ್ತ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ಶ್ರೀ ನಾಗದೇವರಿಗೆ ಹಾಲಿಟ್ಟು ಸೇವೆ ಹಾಗೂ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆಯಿತು.
ದೇವಸ್ಥಾನದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ ಆಚಾರ್ಯ ನೇತೃತ್ವದಲ್ಲಿ ಮಂಗಳ ಗಣ ಯಾಗ ಮಹಾ ಸಂಪ್ರೋಕ್ಷಣೆ, ಮಹಾ ಮಂತ್ರಾಕ್ಷತೆ, ಪ್ರಾಯಶ್ಚಿತ್ತ ಪೂರ್ವಕ ಕಲಶಾಧಿವಾಸ ಆದಿವಾಸ ಹೋಮ, ಕಲಶಾಭಿಷೇಕ, ಮಹಾಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ದೀಪಾರಾಧನೆ ಸೇವೆ, ನಾಗಸನ್ನಿಧಿಯಲ್ಲಿ ಹಾಲಿಟ್ಟು ಸೇವೆ, ರಾತ್ರಿ ಸಗ್ರಿ ಗೋಪಾಲಕೃಷ್ಣ ಸಾಮಗರ ನೇತೃತ್ವದಲ್ಲಿ ಮುದ್ದೂರು ವಿಷ್ಣು ಪ್ರಸಾದ ವೈದ್ಯ ಬಳಗದವರ ಸಹಭಾಗಿತ್ವದಲ್ಲಿ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆಯಿತು.