ಗೂಡ್ಸ್ ಟೆಂಪೋ ರಿಕ್ಷಾಕ್ಕೆ ಬೈಕ್ ಡಿಕ್ಕಿ ,ಬೈಕ್ ಸವಾರ ಗಂಭೀರ
Friday, June 2, 2023
ಹಳೆಯಂಗಡಿ:ಗೂಡ್ಸ್ ಟೆಂಪೊ ರಿಕ್ಷಾಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಡುಪಣಂಬೂರು ಬಸ್ಸು ನಿಲ್ದಾಣದ ಬಳಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ಬೈಕ್ ಸವಾರರನ್ನು ಮೂಲ್ಕಿಯ ಲಿಂಗಪ್ಪಯ್ಯ ಕಾಡು ನಿವಾಸಿ ಅಮೀರ್(28)ಎಂದು ಗುರುತಿಸಲಾಗಿದೆ.ಗಾಯಾಳು ಬೈಕ್ ಸವಾರರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.