-->

ಮಂಗಳೂರು ನಗರ ಉತ್ತರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

ಮಂಗಳೂರು ನಗರ ಉತ್ತರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

ಕಾವೂರು:ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ಪ್ರಥಮ ವಿಶೇಷ ಕಾರ್ಯಕಾರಿಣಿ ಸಭೆ ಮತ್ತು ಅವಲೋಕನಾ ಸಭೆಯು ಕಾವೂರು ವ್ಯವಸಾಯ ಸಹಕಾರಿ ಸಭಾಭವನದಲ್ಲಿ ನಡೆಯಿತು.

ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಡಾ. ಭರತ್ ಶೆಟ್ಟಿಯವರನ್ನು ಮಂಡಲದ ವತಿಯಿಂದ ಸನ್ಮಾನಿಸಲಾಯಿತು.

ಮತದಾರರಿಗೂ ಮತ್ತು ಚುನಾವಣೆಯಲ್ಲಿ ರಾತ್ರಿ ಹಗಲು ಅನ್ನದೇ‌ ಕೆಲಸ ಮಾಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಶಾಸಕರಾದ ಡಾ. ಭರತ್ ಶೆಟ್ಟಿಯವರು ಧನ್ಯವಾದ ಅರ್ಪಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್, ಮಂಡಲ ಪ್ರದಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಜಿಲ್ಲಾ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807