ಓದುವ ಗ್ರಹಿಕೆಯ ಸಾಮಾರ್ಥ್ಯವನ್ನು ಹೆಚ್ಚಿಸಲು ಸಂಗೀತ ಉತ್ತಮ ಮಾರ್ಗ
Tuesday, June 13, 2023
ಪುನರೂರು: ಮಕ್ಕಳಲ್ಲಿ ಓದುವ ಗ್ರಹಿಕೆಯ ಸಾಮಾರ್ಥ್ಯವನ್ನು ಹೆಚ್ಚಿಸಲು ಸಂಗೀತವು ಒಂದು ಉತ್ತಮ ಮಾರ್ಗವಾಗಿದೆ. ಎಲ್ಲ ಮಕ್ಕಳಿಗೆ ಓದುವುದು ಒಂದು ಪ್ರಮುಖ ಕೌಶಲವಾಗಿದ್ದು. ಎಲ್ಲ ವಿಷಯಗಳನ್ನು ಗ್ರಹಿಸಲು ಸಂಗೀತ ಸಹಕರಿಸುತ್ತದೆ ಎಂದು ವಾಯ್ಸ್ ಆಫ್ ಅರಾಧನದ ನಿರ್ದೇಶಕಿ ಪದ್ಮಶ್ರೀ ಭಟ್ ಹೇಳಿದರು .
ಅವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಈ ಶೈಕ್ಷಣಿಕ ವರ್ಷದ ಉಚಿತ ಸಂಗೀತ ತರಗತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಸಂಗೀತ ಶಿಕ್ಷಣವು ಮಕ್ಕಳಿಗೆ ಸಂಗೀತ ಕೌಶಲಗಳನ್ನು ಬೆಳೆಸಿಕೊಳ್ಳಲು ಅವಕಾಶ ನೀಡುವುದಲ್ಲದೆ, ಜ್ಞಾನದ ಬಗ್ಗೆ ಹೆಚ್ಚಿನ ಒಲವು ನೀಡುತ್ತದೆ ಎಂದರು.
ಈ ಸಂದರ್ಭ ಶ್ರೀ ಶಾರದಾ ಸೊಸೈಟಿಯ ಕೋಶಾಧಿಕಾರಿ ಕೊಡೆತ್ತೂರು ಭುವನಾಭಿರಾಮ ಉಡುಪ, ನಿರ್ದೇಶಕ ಪಿ.ಎಸ್. ಸುರೇಶ್ ರಾವ್, ಶಾಲಾ ಸಂಚಾಲಕ ದೇವಪ್ರಸಾದ್ ಪುನರೂರು, ಸಂಗೀತಾ ಗುರುಗಳಾದ ಆದರ್ಶ್ ಎಸ್. ಜೆ ಉಪಸ್ಥಿತರಿದ್ದರು.
ಶಾಲಾ ಪ್ರಾಂಶುಪಾಲ ಜಿತೇಂದ್ರ ವಿ ರಾವ್ ಸ್ವಾಗತಿಸಿದರು, ಸಹ ಶಿಕ್ಷಕಿ ಪ್ರಜ್ವಲ ಕಾರ್ಯಕ್ರಮ ನಿರೂಪಿಸಿದರು ಹಾಗೂ ಹೇಮಲತಾ ವಂದಿಸಿದರು.