ಭಾರತೀಯ ಜನತಾ ಪಾರ್ಟಿ ಮೂಲ್ಕಿ - ಮೂಡುಬಿದಿರೆ ಮಂಡಲದ ವತಿಯಿಂದ ಸ್ವಾತಂತ್ರೋತ್ಸವದ
ಅಂಗವಾಗಿ ಆಯೋಜಿಸಲಾಗಿದ್ದ "ತಿರಂಗ ಯಾತ್ರೆ" ಯಲ್ಲಿ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚರ್ಯವರ್ಯ ಸ್ವಾಮೀಜಿ,
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಂಡಲಾಧ್ಯಕ್ಷ ಸುನಿಲ್ ಆಳ್ವ, ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.