-->


ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ರ ಸಾಲಿನ  ಅಧ್ಯಕ್ಷ ರಾಗಿ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜ್ ಶೇಖರ್ ಕೋಟ್ಯಾನ್ ಪುನರಾಯ್ಕೆ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ರ ಸಾಲಿನ ಅಧ್ಯಕ್ಷ ರಾಗಿ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜ್ ಶೇಖರ್ ಕೋಟ್ಯಾನ್ ಪುನರಾಯ್ಕೆ


ಮುಲ್ಕಿ: ರಾಷ್ಟ್ರೀಯ ಬಿಲ್ಲವರ  ಮಹಾಮಂಡಲದ 2023-24ನೇ ರ ಸಾಲಿನ  ಅಧ್ಯಕ್ಷ ರಾಗಿ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜ್ ಶೇಖರ್ ಕೋಟ್ಯಾನ್ ಪುನರಾಯ್ಕೆಯಾಗಿದ್ದಾರೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸಭಾಂಗಣದಲ್ಲಿ ನಡೆದ 2022 - 23ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ  ಡಾ. ರಾಜಶೇಖರ್ ಕೋಟ್ಯಾನ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಇತರ ಪದಾದಿಕಾರಿಗಳು: ಉಪಾಧ್ಯಕ್ಷರುಗಳಾಗಿ ಸೂರ್ಯಕಾಂತ್ ಜಯ ಸುವರ್ಣ,ಹರೀಶ್ ಡಿ ಸಾಲ್ಯಾನ್ ಬಜೆಗೋಳಿ,
 ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಬಾಳ ಗಂಗಾಧರ ಪೂಜಾರಿ ಚೇಳ್ಯಾರು, ಜೊತೆ ಕಾರ್ಯದರ್ಶಿಗಳಾಗಿ ಗಣೇಶ್ ಪೂಜಾರಿ ಗಂಜಿಮಠ,ಶಿವಾಜಿ ಸುವರ್ಣ ಬೆಳ್ಳೆ, ಕೋಶಾಧಿಕಾರಿಯಾಗಿ ಕೆ. ಪ್ರಭಾಕರ ಬಂಗೇರ ಕಾರ್ಕಳ, ಜೊತೆ ಕೋಶಾಧಿಕಾರಿ ಗಣೇಶ ಎಲ್. ಪೂಜಾರಿ ಬೈಂದೂರು ಆಯ್ಕೆಯಾಗಿರುತ್ತಾರೆ. ಚುನಾವಣಾ ಪ್ರಕ್ರಿಯೆಯನ್ನು ಚಂದ್ರಶೇಖರ ಸುವರ್ಣ ಮೈಸೂರು ಮತ್ತು  ಹರಿಶ್ಚಂದ್ರ ಅಮೀನ್  ಕಟಪಾಡಿ ನಡೆಸಿಕೊಟ್ಟರು.
ನೂತನ ಅಧ್ಯಕ್ಷರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು, ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ,ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ರಮೇಶ್ ಅಮೀನ್ ಕೊಕ್ಕರಕಲ್,ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಗೌ ವೆಂಕಟೇಶ ಹೆಬ್ಬಾರ್ 
 ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಅತಿಕಾರಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್,ಗೌತಮ್ ಜೈನ್ ಮುಲ್ಕಿ ಅರಮನೆ, ಕಾಂಗ್ರೆಸ್ ನಾಯಕರಾದ ಧನಂಜಯಮಟ್ಟು ,ದಯಾನಂದ ಮಟ್ಟು, ಕಿಶೋರ್ ಶೆಟ್ಟಿ ಬಪ್ಪನಾಡು  ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ

Ads on article

Advertise in articles 1

advertising articles 2

Advertise under the article