ಚಂದ್ರಯಾನ - 3 ಯಶಸ್ವಿ, ವಿಜ್ಞಾನಿಗಳ ಸಾಧನೆ ಹಾಗೂ ಅವಿರತ ಶ್ರಮ ಶ್ಲಾಘನೀಯ - ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ
Wednesday, August 23, 2023
ಮುಲ್ಕಿ: ಇಸ್ರೋ ವಿಜ್ಞಾನಿಗಳ ಬಹುದಿನಗಳ ಶ್ರಮಕ್ಕೆ ಪ್ರತಿಫಲ ಸಿಕ್ಕಿದ್ದು ಚಂದ್ರಯಾನ -3 ಯೋಜನೆ ಯಶಸ್ಸು ಕಂಡಿದ್ದು ವಿಜ್ಞಾನಿಗಳ ಸಾಧನೆಗೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ. ಅವರು ಮಾಧ್ಯಮದ ಜೊತೆ ಮಾತನಾಡಿ ಭಾರತದ ಶ್ರೇಷ್ಠ ಪ್ರಧಾನಿ ನರೇಂದ್ರ ಮೋದಿಯವರ ಬೆಂಬಲದ ಜೊತೆಗೆ ವಿಜ್ಞಾನಿಗಳ ಸಾಧನೆ ಹಾಗೂ ಅವಿರತ ಶ್ರಮ ಶ್ಲಾಘನೀಯವಾಗಿದ್ದು ದೇಶದ ಬಹು ಕೋಟಿ ಪ್ರಜೆಗಳ ಪ್ರಾರ್ಥನೆ ಫಲಪ್ರದವಾಗಿದೆ ಎಂದಿದ್ದಾರೆ.
ಇಸ್ರೋ ಸಾಧನೆಗೆ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಕ.ಸಾ.ಪ ಮಾಜೀ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ವೇ.ಮೂ. ವಾದಿರಾಜ ಉಪಾಧ್ಯಾಯ ಕೊಲಕಾಡಿ, ಮಂಡಲಾಧ್ಯಕ್ಷ ಸುನಿಲ್ ಆಳ್ವ, ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮನೋಹರ ಕೋಟ್ಯಾನ್, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಮಾಜೀ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಗೌತಮ್ ಜೈನ್ ಮುಲ್ಕಿ ಅರಮನೆ, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ಗೌರವಾಧ್ಯಕ್ಷ ವೆಂಕಟೇಶ ಹೆಬ್ಬಾರ್,ಮುಲ್ಕಿ ನ.ಪಂ ಮುಖ್ಯಾಧಿಕಾರಿ ಎನ್ಎಂ ಮೇಸ್ತ, ಕಿಶೋರ್ ಶೆಟ್ಟಿ ಬಪ್ಪನಾಡು, ವಿನೋದ್ ಸಾಲ್ಯಾನ್ ಬೆಳ್ಳಾಯರು ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.