-->

ಧರ್ಮಾಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ,ಮುಲ್ಕಿ ಸೀಮೆಯ ಅರಮನೆಯಲ್ಲಿ ವಿಶೇಷ ಸಭೆ

ಧರ್ಮಾಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ,ಮುಲ್ಕಿ ಸೀಮೆಯ ಅರಮನೆಯಲ್ಲಿ ವಿಶೇಷ ಸಭೆ



ಮುಲ್ಕಿ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಲ್ಕಿ ವಲಯದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಅಪಪ್ರಚಾರವನ್ನು ಖಂಡಿಸಿ ಪಡುಪಣಂಬೂರು ಮುಲ್ಕಿ ಸೀಮೆಯ ಅರಮನೆಯಲ್ಲಿ ವಿಶೇಷ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು ಮಾತನಾಡಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಧಾರ ರಹಿತ ಆರೋಪ ಮಾಡುವವರು ದಾಖಲೆ ಒದಗಿಸಲಿ ವಿನಾ ಕಾರಣ ಶ್ರೀ ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ವ್ಯವಸ್ಥಿತ ಪಿತೂರಿ ನಡೆಸುತ್ತಿರುವುದು ದುರದೃಷ್ಟಕರ. ಈ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಿ ಆ.4 ಶುಕ್ರವಾರ ಉಜಿರೆಯಲ್ಲಿ ನಡೆಯುವ ಹಕ್ಕೊತ್ತಾಯ ಸಭೆಯಲ್ಲಿ ಪಾಲ್ಗೊಂಡು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಸೂಚಿಸಬೇಕು ಎಂದರು. 
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಲ್ಕಿ ವಲಯದ ಅಧಿಕಾರಿ ಕರುಣಾಕರ ಮಾತನಾಡಿ ಕೊಲೆಯಾದ ಮುಗ್ಧ ಯುವತಿ ಸೌಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲ ದುಷ್ಟ ಶಕ್ತಿಗಳು ಶ್ರೀ ಧರ್ಮಸ್ಥಳ ಕ್ಷೇತ್ರವನ್ನು ದೂಷಿಸುತ್ತಿರುವುದು ಸರಿಯಲ್ಲ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ಇಲ್ಲದೆ ಬೀದಿ ಬದಿಯಲ್ಲಿ ನಿಂತುಕೊಂಡು ಅನಗತ್ಯ ಆರೋಪ ಮಾಡುತ್ತಿದ್ದಾರೆ,ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು ,ಮರು ತನಿಖೆಯಾಗಲಿ, ಆಧಾರ ರಹಿತ ಮಾತನಾಡುವವರ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ನಾವು ಖಾವಂದರ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡುತ್ತೇವೆ ಎಂದರು.
ಸಭೆಯಲ್ಲಿ ಮುಲ್ಕಿ ಅರಮನೆಯ ಗೌತಮ್ ಜೈನ್, ಅತಿಕಾರಿಬೆಟ್ಟು ಗ್ರಾ.ಪಂ. ಅಧ್ಯಕ್ಷ ಮನೋಹರ ಕೋಟ್ಯಾನ್ , ವಲಯ ಜನಜಾಗೃತಿ ಸಮಿತಿ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು, ಶಂಕರ್ ಪಡಂಗ, ವಲಯ ಮೇಲ್ವಿಚಾರಕಿ ನಿಶ್ಮಿತಾ , ಗಂಗಾಧರ ಶೆಟ್ಟಿ ಬರ್ಕೆ ತೋಟ ಮತ್ತಿತರರು ಉಪಸ್ಥಿತರಿದ್ದರು

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807