ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಆ. 17-ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ - ಆಮಂತ್ರಣ ಪತ್ರಿಕೆ ಬಿಡುಗಡೆ
ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಆ. 17 ಗುರುವಾರ ಸಿಂಹ ಸಂಕ್ರಮಣದಂದು ಲೋಕಕಲ್ಯಾಣಾರ್ಥವಾಗಿ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರದ ಅರ್ಚಕ ಪುರುಷೋತ್ತಮ ಭಟ್ ವಿಶೇಷ ಪ್ರಾರ್ಥನೆ ನಡೆಸಿದರು.
ಶ್ರೀಪತಿ ಭಟ್ ಮಾತನಾಡಿ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಲೋಕದ ದುರಿತಗಳು ನಾಶವಾಗಿ ಶಾಂತಿ ನೆಲೆಸಲು ಸಾಧ್ಯ,ಭಕ್ತರ ಸಹಕಾರದ ಮೂಲಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ಯಶಸ್ವಿಯಾಗಿ ನಡೆಯಲಿದೆ ಎಂದರು.
ಅತಿಕಾರಿಬೆಟ್ಟು ಮನೋಹರ ಕೋಟ್ಯಾನ್, ಸದಸ್ಯೆ ಪದ್ಮಿನಿ ವಿಜಯ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ,ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ,ಉಪಾಧ್ಯಕ್ಷ ಪ್ರವೀಣ್, ಉದಯಕುಮಾರ್ ಶೆಟ್ಟಿ ಆದಿಧನ್, ಮಹಿಳಾಭಜನಾ ಮಂಡಳಿ ಅಧ್ಯಕ್ಷೆ ರೂಪಾ ವಿ ಭಟ್, ಪ್ರಬಂಧಕ ಕಿಶೋರ್ ಶೆಟ್ಟಿ ಮತ್ತು ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.