ತೋಕೂರು ದೇವಳದಲ್ಲಿ ತೆನೆ ಕಟ್ಟುವ ಕಾರ್ಯಕ್ರಮ
Thursday, September 21, 2023
ಹಳೆಯಂಗಡಿ : ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ತೆನೆ ಕಟ್ಟುವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕ್ಷೇತ್ರದ ಅರ್ಚಕರಾದ ಮಧುಸೂದನ್ ಆಚಾರ್ಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ತೆನೆ (ಕದಿರು) ಗೆ ವಿಶೇಷ ಪೂಜೆ ಸಲ್ಲಿಸಿ ತೆನೆ ಕಟ್ಟುವ ಕಾರ್ಯಕ್ರಮ ಹಾಗೂ ಭಕ್ತರಿಗೆ ಪ್ರಸಾದ ರೂಪದಲ್ಲಿ ತೆನೆಯನ್ನು ವಿತರಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿದಾಸ್ ಭಟ್ ಹಾಗೂ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.