ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ
Thursday, September 28, 2023
ಮೂಲ್ಕಿ : ಮಾದಕ ದ್ರವ್ಯ ಜನರಲ್ಲಿ ಭಯ, ಆತಂಕ ಹಸಿವು ಮತ್ತು ತೂಕದ ತೀವ್ರ ನಷ್ಟ, ಮಲಬದ್ಧತೆ, ಹೆಚ್ಚಿದ ಆತಂಕ ಮತ್ತು ಕಿರಿಕಿರಿ, ನಿದ್ರಾಹೀನತೆ ಮತ್ತು ಬೌದ್ಧಿಕ ಕಾರ್ಯಚಟುವಟಿಕೆಗಳ ಕ್ರಮೇಣ ದುರ್ಬಲತೆಗೆ ಕಾರಣವಾಗಬಹುದು ಎಂದು ಮೂಲ್ಕಿ ಪೊಲೀಸ್ ಠಾಣಾ ಉಪ ನಿರೀಕ್ಷಕ ಮಾರುತಿ ಪಿ ಹೇಳಿದರು. ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಮಾದಕ ದ್ರವ್ಯ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.
ಮೂಲ್ಕಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶ್ರೀದೇವಿ ಚೌಹಾಣ್ ಹಾಗೂ ಸುರೇಂದ್ರನ್ ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲ ದಿವ್ಯಾ ಟಿ ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕಿ ಹೇಮಲತಾ ವಂದಿಸಿದರು, ದೀಪಿಕ ಕಾರ್ಯಕ್ರಮ ನಿರೂಪಿಸಿದರು,.