ಮುಲ್ಕಿ ವಿಜಯ ಕಾಲೇಜಿನಲ್ಲಿ ಬಲೆ ತುಳು ಲಿಪಿ ಕಲ್ಪುಗ' ಕಾರ್ಯಕ್ರಮ
Tuesday, October 10, 2023
ಮೂಲ್ಕಿ:ವಿಜಯ ಕಾಲೇಜು, ಮುಲ್ಕಿ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವರ ಸಹಯೋಗದಲ್ಲಿ ಬಲೆ ತುಳು ಲಿಪಿ ಕಲ್ಪುಗ' ಕಾರ್ಯಕ್ರಮವು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಡಾ.ಆಕಾಶ್ ರಾಜ್ ಜೈನ್ ಇವರು ನೆರವೇರಿಸಿದರು. ನಂತರ ಮಾತನಾಡಿದ ಅವರು ತುಳು ಸಂಸ್ಕೃತಿ, ಸಂಪ್ರದಾಯ ಹಾಗೂ ಆರೋಗ್ಯದ ಮೇಲೆ ಸಂಪ್ರದಾಯದ ಪರಿಣಾಮ ಇದರ ವೈಜ್ಞಾನಿಕ ನೆಲೆಗಟ್ಟನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶ್ರೀಮಣಿ ಶೆಟ್ಟಿ ಅವರು ವಹಿಸಿ ಮಾತನಾಡಿ ತುಳು ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಜೈ ತುಳುನಾಡು ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು . ಜೈ ತುಳುನಾಡು ಸಂಸ್ಥೆಯ ಉಪಾಧ್ಯಕ್ಷ ಉದಯ ಪೂಂಜ,ಪ್ರಧಾನ ಕಾರ್ಯದರ್ಶಿ ಕಿರಣ್ ತುಲುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದರು. ಸಂಸ್ಥೆಯ ದೈಹಿಕ ಶಿಕ್ಷಕ ವಿಶ್ಲೇಶ್ ಭಟ್ ಕಾರ್ಯಕ್ರಮ ಸಂಯೋಜಿಸಿದರು. ಬಿ.ಸಿ.ಎ ವಿದ್ಯಾರ್ಥಿನಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪ್ರಥಮ ಸ್ವಾಗತಿಸಿದರು. ಅನ್ವಿತಾ ವಂದಿಸಿದರು. ನಂತರ ಲಿಪಿ ಕಾರ್ಯಾಗಾರಕ್ಕೆ ಲಿಪಿ ಬರೆಯುವ ಮೂಲಕ ಚಾಲನೆ ನೀಡಲಾಯಿತು.