ಎಕ್ಕಾರು ಬಂಟರಸಂಘದಲ್ಲಿ ಬಯಲು ರಂಗ ಮೈದಾನದ ಉದ್ಘಾಟನೆ
Saturday, November 25, 2023
ಎಕ್ಕಾರು:ಎಕ್ಕಾರು ಬಂಟರ ಸಂಘದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಎಕ್ಕಾರು ಸುಜಾತ ಶೆಟ್ಟಿ ಹಾಗೂ ಕನ್ಯಾನ ಸದಾಶಿವ ಶೆಟ್ಟಿ ಬಯಲು ರಂಗಮೈದಾನದ ಉದ್ಘಾಟನೆ ,ಸಾಧಕರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ,ವಿದ್ಯಾರ್ಥಿ ವೇತನ ಕಾರ್ಯಕ್ರಮ ನಾಳೆ ಎಕ್ಕಾರು ಬಂಟರ ಭವನದ ನಡ್ಯೋಡಿಗುತ್ತು ಶಾರದಾ ಭಾಸ್ಕರ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಗಣ್ಯಾತೀಗಣ್ಯರು,ಬಂಟರ ಸಂಘಗಳ ಪ್ರಮುಖರುಗಳು ಉಪಸ್ಥಿತಲಿರುವರು.ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.ಹೇರಂಭ ಇಂಡಸ್ಟ್ರೀಸ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಬಯಲು ರಂಗಮಂದಿರವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಎಕ್ಕಾರು ಶ್ರೀಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರ ಮನೆ,ಕಟೀಲು ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಹಾಗೂ ಅನುವಂಶಿಕ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಬೆಳಪು ಡಾ.ದೇವಿಪ್ರಸಾದ್ ಶೆಟ್ಟಿಐಕಳ ,ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ,ಉದ್ಯಮಿಗಳಾದ ಕೃಷ್ಣ ಡಿ ಶೆಟ್ಟಿ,ಬಾಸ್ಕರ್ ಶೆಟ್ಟಿ ನಡ್ಯೋಡಿಗುತ್ತು,ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ,ತಾಲೂಕು ಬಂಟರ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು,ನ್ಯಾಯವಾದಿ ವೈ.ವಿಕ್ರಮ್ ಹೆಗ್ಡೆ ಅಗರಗುತ್ತು,ಬಂಟರ ಸಂಘಗಳ ಪ್ರಮುಖರುಗಳು,ಗಣ್ಯಾತೀಗಣ್ಯರು ಉಪಸ್ಥಿತಲಿದ್ದಾರೆ.
ಈ ಸಂದರ್ಭ ಸಾಧಕರಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ,ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮಗಳು ನಡೆಯಲಿದೆ.
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗಣನಾಥ ಶೆಟ್ಟಿ ಎಕ್ಕಾರು ಹಾಗೂ ಎಕ್ಕಾರು ಸಿರಿ ಕುರಾಲ್ ರೈತ ಉತ್ಪಾದಕರ ಸಂಘದ ಅಧ್ಯಕ್ಷ ಹಾಗೂ ಹಿರಿಯ ಕೃಷಿಕ ಸದಾಶಿವ ಶೆಟ್ಟಿ ಮುರ ಅವರುಗಳು ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಲಿದ್ದಾರೆ.