-->

ಪಾವಂಜೆಯಲ್ಲಿ  ಚಂಪಾಷಷ್ಠಿ ಮಹೋತ್ಸವ

ಪಾವಂಜೆಯಲ್ಲಿ ಚಂಪಾಷಷ್ಠಿ ಮಹೋತ್ಸವ

 ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ದೇವಸ್ಥಾನ ನಾಗವೃಜ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ವಿಶೇಷ ಪ್ರಾರ್ಥನೆ ನಡೆದು ಪ್ರಾತಃ ಬಲಿ, ಶ್ರೀ ದೇವರಿಗೆ ಪೂಜೆ, ಕಲಶಾಭಿಷೇಕ, ಮಹಾಪೂಜೆ ಉತ್ಸವ ಬಲಿ, ಮಹಾ ಅನ್ನಸಂತರ್ಪಣೆ ನಡೆಯಿತು.
ಸಾಯಂಕಾಲ ನಿತ್ಯರಂಗ ಪೂಜೆ, ಉತ್ಸವ ಬಲಿ, ಶ್ರೀ ಅಣ್ಣಪ್ಪ ಸ್ವಾಮಿಯ ಭೇಟಿ,  ಅವಭೃತೋತ್ಸವ, ಧ್ವಜಾವರೋಹಣ, ಸಂಪ್ರೋಕ್ಷಣೆ, ಮಂತ್ರಾಕ್ಷತೆ, ಶ್ರೀ ಅಣ್ಣಪ್ಪ ಸ್ವಾಮಿಗೆ ನರ್ತನ ಸೇವೆ, ಭಂಡಾರವನ್ನು ಮೂಲಸ್ಥಾನಕ್ಕೆ ಸೇರಿಸುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807