-->


ಹಿರಿಯ ನಟಿ ಡಾ. ಲೀಲಾವತಿ ರವರು ಕನ್ನಡ ಚಿತ್ರರಂಗದ ದೊಡ್ಡ ಆಸ್ತಿಯಾಗಿದ್ದರು-ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಹಿರಿಯ ನಟಿ ಡಾ. ಲೀಲಾವತಿ ರವರು ಕನ್ನಡ ಚಿತ್ರರಂಗದ ದೊಡ್ಡ ಆಸ್ತಿಯಾಗಿದ್ದರು-ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ



ಮುಲ್ಕಿ: ಸ್ಯಾಂಡಲ್ ವುಡ್ ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ  ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಮಾಧ್ಯಮದ ಜೊತೆ ಮಾತನಾಡಿ ಹಿರಿಯ ನಟಿ ಡಾ. ಲೀಲಾವತಿ ರವರು ಕನ್ನಡ ಚಿತ್ರರಂಗದ ದೊಡ್ಡ ಆಸ್ತಿಯಾಗಿದ್ದರು. ಅವರ ನಟನೆ ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ಕ್ಷಣಗಳು ಎಂದು ಬಣ್ಣಿಸಿದ್ದಾರೆ. ನಮ್ಮ ಆಶ್ರಮದ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲೂ ಭಾಗಿಯಾಗುತ್ತಿದ್ದ ಅವರು ಭಕ್ತಿಯ ಪ್ರತೀಕವಾಗಿದ್ದರು. ಬಹುಭಾಷಾ ನಟಿಯಾಗಿಯೂ  ಚಿತ್ರರಂಗದಲ್ಲಿ ಸಾಧಕರಾಗಿ ಗುರುತಿಸಿಕೊಂಡಿದ್ದರು ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ನಿಧನಕ್ಕೆ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್,
ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಲ್ಕಿ ಜಿಎಸ್‌ಬಿ ಸಭಾದ  ಅತುಲ್ ಕುಡ್ವ ,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ , ಮುಲ್ಕಿ ವಿಜಯ ರೈತ ಸೇವಾ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಗೌರವಾಧ್ಯಕ್ಷ ವೆಂಕಟೇಶ್ ಹೆಬ್ಬಾರ್,
ಅತಿಕಾರಿ ಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್ , ಸದಸ್ಯ ದಯಾನಂದ ಮಟ್ಟು
ಮುಲ್ಕಿ ನ.ಪಂ ಮಾಜೀ ಅಧ್ಯಕ್ಷ ಸುಭಾಶ್ ಶೆಟ್ಟಿ, ಸದಸ್ಯ ಹರ್ಷ ರಾಜ ಶೆಟ್ಟಿ, ಸತೀಶ್ ಅಂಚನ್, ಯೋಗೀಶ್ ಕೋಟ್ಯಾನ್,ಪುತ್ತು ಬಾವ, ಮುಲ್ಕಿ ನ.ಪಂ.ಮುಖ್ಯಾಧಿಕಾರಿ ಇಂದು ಎಂ,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಮಾಜೀ ಸದಸ್ಯ ಉಮೇಶ್ ಮಾನಂಪಾಡಿ, ಸಾಮಾಜಿಕ ಕಾರ್ಯಕರ್ತ ಶರತ್ ಕಾರ್ನಾಡ್
 ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್,ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ  ಶೀತಲ್ ಸುಶೀಲ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್,   ಡಾ. ಹರಿಶ್ಚಂದ್ರ ಪಿ.ಸಾಲ್ಯಾನ್, ಶಶಿಂದ್ರ ಸಾಲ್ಯಾನ್,ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ , ರಾಜೇಶ್ ಅಮೀನ್ ಮುಲ್ಕಿ, ಉದ್ಯಮಿ  ಶಿವರಾಮ್ ಜಿ ಅಮೀನ್, ಕಿಶೋರ್ ಶೆಟ್ಟಿ ಬಪ್ಪನಾಡು, ಗೌತಮ್ ಜೈನ್ ಮುಲ್ಕಿ ಅರಮನೆ, ಶಂಕರ್ ಪಡಂಗ,ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಪುನೀತ್ ಕೃಷ್ಣ, ಹರೀಶ್ ಹೆಜ್ಮಾಡಿ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article