ಡಿ.27- ಮುಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ
Wednesday, December 20, 2023
ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್, ಮುಲ್ಕಿ ತಾಲೂಕು ಘಟಕದ ವತಿಯಿಂದ ಮುಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 27 ಬುಧವಾರ ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮ್ಮೇಳನಾಧ್ಯಕ್ಷರಾದ ಡಾ. ಗಣೇಶ್ ಅಮೀನ್ ಸಂಕಮಾರ್ ನೇತೃತ್ವದಲ್ಲಿ ನಡೆಯಲಿದ್ದು,ಈ ಬಗ್ಗೆ ಪೂರ್ವಭಾವಿ ಸಭೆಯು ಮಂಗಳವಾರದಂದು ಕಾರ್ನಾಡ್ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ದ.ಕ.ಜಿಲ್ಲಾ ಸಾಹಿತ್ಯ ಪರಿಷತ್, ಮುಲ್ಕಿ ತಾಲೂಕು ಘಟಕದ ಅಧ್ಯಕ್ಷ ಮಿಥುನ್ ಕೊಡೆತ್ತೂರು ಮಾತನಾಡಿ ಸಮ್ಮೇಳನದಲ್ಲಿ ಕನ್ನಡ ನಾಡು ನುಡಿಗೆ ಪ್ರಾಶಸ್ತ್ಯ ನೀಡುವುದರ ಜೊತೆಗೆ ಪ್ರಥಮ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಸರ್ವ ರೀತಿಯಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.
ಸಮ್ಮೇಳನ ಸಮಿತಿಯ ಅಧ್ಯಕ್ಷ ಸುನಿಲ್ ಆಳ್ವ ಮಾತನಾಡಿ ಮುಲ್ಕಿ ತಾಲೂಕು ನೂತನವಾಗಿ ರಚನೆಯಾಗಿದ್ದು ಪ್ರಥಮ ಸಾಹಿತ್ಯ ಸಮ್ಮೇಳನದ ಮೂಲಕ ತಾಲೂಕು ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯಬೇಕಾಗಿದ್ದು ಸರ್ವರ ಪ್ರೋತ್ಸಾಹ ಬೇಕು ಎಂದರು.
ಸಮಿತಿಯ ಕಾರ್ಯದರ್ಶಿ ದೇವಪ್ರಸಾದ್ ಪುನರೂರು, ಸಂಚಾಲಕ ಡಾ. ವಾಸುದೇವ ಬೆಳ್ಳೆ, ಸಮಿತಿಯ ಸದಸ್ಯರಾದ ಮೋಹನ್ ದಾಸ್ ಸುರತ್ಕಲ್, ಅಶೋಕ್ ಕುಮಾರ್ ಶೆಟ್ಟಿ, ಮತ್ತಿತರರು ಮಾತನಾಡಿದರು
ಸಭೆಯಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ವೆಂಕಟೇಶ್ ಹೆಬ್ಬಾರ್, ಮಾಜೀ ನಪಂ ಸದಸ್ಯ ಅಬ್ದುಲ್ ರಸಾಕ್ ಮತ್ತಿತರರು ಸಲಹೆ ಸೂಚನೆಗಳನ್ನು ನೀಡಿದರು.
ಪ್ರೌಢಶಾಲಾ ಶಿಕ್ಷಕರಕ್ಷಕ ಸಂಘದ ಯೋಗಿನಿ, ಸಮಿತಿಯ ಜೊಸ್ಸಿ ಪಿಂಟೊ ಉಪಸ್ಥಿತರಿದ್ದರು.
ಸಭೆಯಲ್ಲಿ ಸಮ್ಮೇಳನದ ನೂತನ ಸಮಿತಿಯ ಬಗ್ಗೆ ಮಾಹಿತಿ ನೀಡಲಾಯಿತು.