-->

ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ ಗಣೇಶ ಅಮೀನ್ ಸಂಕಮಾರ್ ಆಯ್ಕೆ

ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ ಗಣೇಶ ಅಮೀನ್ ಸಂಕಮಾರ್ ಆಯ್ಕೆ

ಮೂಲ್ಕಿ:ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು ಕನ್ನಡ ಸಾಹಿತಿ ಡಾ ಗಣೇಶ ಅಮೀನ್ ಸಂಕಮಾರ್ ಆಯ್ಕೆಯಾಗಿದ್ದಾರೆ ಎಂದು ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಮಾಧ್ಯಮಕ್ಕೆ ತಿಳಿಸಿದ್ದಾರೆ.ಇದೇ ಡಿಸೆಂಬರ್ 27ರಂದು ಮೂಲ್ಕಿ ಕಾರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಡಾ ಗಣೇಶ ಅಮೀನ್ ಸಂಕಮಾರ್ ಅವರು ತುಳು ಕನ್ನಡ ಜಾನಪದ ವಿದ್ವಾಂಸರಾಗಿ ಪ್ರಸಿದ್ಧರಾಗಿದ್ದಾರೆ. ೩೩ ವರ್ಷಗಳ ಕಾಲ ಉಪನ್ಯಾಸಕರಾಗಿ ಸಂತ ಅಲೋಶಿಯಸ್  ಕಾಲೇಜಿನಲ್ಲಿ ಡೀನ್ ಆಗಿ,ಕಾಟಿಪಳ್ಳ ನಾರಾಯಣ ಗುರು ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿ ಸೇವೆ ಸಲ್ಲಿಸಿದ್ದು,ಸಾವಿರದ ಸತ್ಯಗಳು.ನಿನಾದ.ಮಣ್ಣಿನೊಳಗಿನ ಅನ್ನ.ನುಡಿಸಿಂಗಾರ.ಬ್ರಹ್ಮಬಲಾಂಡಿ.ಧರ್ಮರಸು ಉಳ್ಳಾಯ.ಕರ್ಮ.ಆಗೋಳಿ ಮಂಜಣ್ಣ ಸೇರಿದಂತೆ ಕನ್ನಡ ತುಳುವಿನಲ್ಲಿ ೧೮ ಕೃತಿಗಳನ್ನು ಪ್ರಕಟಿಸಿದ್ದಾರೆ.ಜಾನಪದ ಶಬ್ದ ಶಕ್ತಿ ವಿಷಯದಲ್ಲಿ ಸಂಶೋಧನೆಗಾಗಿ ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.ದೇಶ ವಿದೇಶಗಳಲ್ಲಿ ೫ ಸಾವಿರಕ್ಕೂ ಹೆಚ್ಚು ಉಪನ್ಯಾಸಗಳನ್ನು ನೀಡಿದ್ದಾರೆ.ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ.ಪಾವಂಜೆಯಲ್ಲಿ ತುಳು ಅಧ್ಯಯನ ಕೇಂದ್ರದ ಸ್ಧಾಪನೆ ಹೀಗೆ ಹಲವಾರು ಸಾಹಿತ್ಯದ ಕಂಪನ್ನು ಪಸರಿಸುವಲ್ಲಿ ಯಶಸ್ವಿಯಾದವರಲ್ಲಿ ಒಬ್ಬರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807