-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
 ಹಿರಿಯರ ಆದರ್ಶ ಹಾಗೂ ಶ್ರಮ ದೇವಸ್ಥಾನದ ಅಭಿವೃದ್ಧಿಗೆ ಕಾರಣ-ವಿಶ್ವಪ್ರಿಯ ತೀರ್ಥ ಸ್ವಾಮೀಜಿ

ಹಿರಿಯರ ಆದರ್ಶ ಹಾಗೂ ಶ್ರಮ ದೇವಸ್ಥಾನದ ಅಭಿವೃದ್ಧಿಗೆ ಕಾರಣ-ವಿಶ್ವಪ್ರಿಯ ತೀರ್ಥ ಸ್ವಾಮೀಜಿ



ಮುಲ್ಕಿ: ಇತಿಹಾಸ ಪ್ರಸಿದ್ಧ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಶಿಮಂತೂರು ಪರೆಂಕಿಲ ದಿ. ವೇ.ಮೂ. ವಾಸುದೇವ ಭಟ್ ರವರ 30ನೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ  ಉಡುಪಿ ಅದಮಾರು ಮಠದ ಶ್ರೀ ವಿಶ್ವ ಪ್ರಿಯತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿ
ದಿ. ವಾಸುದೇವ ಭಟ್ಟರು ಶ್ರಮಜೀವಿಯಾಗಿದ್ದು ಅಪಾರ ದೈವ ಭಕ್ತಿಯನ್ನು ಹೊಂದಿದ್ದರು. ಮಾತು ಹರಿತವಾದರೂ ಜನರಿಗೆ ಹಿತವಾದ ನುಡಿಗಳನ್ನು ನೀಡುತ್ತಾ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರೇಪಿಸುತ್ತಿದ್ದರು. ದೇವಸ್ಥಾನದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು ಎಂದರು 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹಿರಿಯರ ಆದರ್ಶ ಯುವಕರಿಗೆ ಪ್ರೇರಣೆಯಾಗಿದ್ದು ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿ ಕಲಿಸಿಕೊಡುವ ಕೆಲಸವಾಗಬೇಕು ಎಂದರು.
ವೇದಿಕೆಯಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ, ವೇ. ಮೂ. ಸುಬ್ರಹ್ಮಣ್ಯ ಭಟ್ ತೋಕೂರು, ವಿಠಲ ಭಟ್ ಪರೆಂಕಿಲ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶ್ರೀಪತಿ ಭಟ್ ಪರೆಂಕಿಲ ರವರನ್ನು ಸ್ವಾಮೀಜಿಯವರು ಕ್ಷೇತ್ರದ ವತಿಯಿಂದ ಗೌರವಿಸಿದರು
ರಾಜೇಶ್ವರಿ ಭಟ್ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ