-->

ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್  ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವೀರಯೋಧ ದಿ.ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಗೌರವಾರ್ಥ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -೨೦೨೪ ಕ್ರಿಕೆಟ್ ಪಂದ್ಯಾಟಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು  ಕ್ರೀಡಾಂಗಣದಲ್ಲಿ  ಚಾಲನೆ ನೀಡಲಾಗಿದೆ. 
ಉದ್ಘಾಟನೆಯ ಬಳಿಕ 
ಸೌಹಾರ್ದ ಪ್ರದರ್ಶನ ಪಂದ್ಯ ನಡೆಯಿತು‌. ಬ್ರ್ಯಾಂಡ್ ಮಂಗಳೂರು ಇಲೆವನ್‌ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಮೀಡಿಯಾ ಇಲೆವನ್ ಮಧ್ಯೆ ಪ್ರದರ್ಶನ ಪಂದ್ಯ ನಡೆಯಿತು.
ಉದ್ಘಾಟನೆಗೆ ಮುನ್ನ ಸಹ್ಯಾದ್ರಿ ಸ್ವಾಗತ ದ್ವಾರದಿಂದ ಕ್ರೀಡಾಂಗಣಕ್ಕೆ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ಮಾಜಿ ಸಚಿವ ಅಭಯಚಂದ್ತ ಜೈನ್ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ  ನಾನಾ ಜಿಲ್ಲಾ ತಂಡಗಳ ಆಟಗಾರರು ತಮ್ಮ ಜಿಲ್ಲೆಯ ಸಾಂಪ್ರದಾಯಿಕ ಉಡುಗೆ-ತೊಡುಗೆಗಳನ್ನು ಧರಿಸಿ ಹೆಜ್ಜೆ ಇರಿಸಿದರು.ಬಳಿಕ ನಾನಾ ಜಿಲ್ಲಾ  ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಎರಡು ದಿನಗಳ ಕಾಲ ಲೀಗ್ ಮಾದರಿಯಲ್ಲಿ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಒಟ್ಟು 24 ತಂಡಗಳು ಭಾಗವಹಿಸಲಿವೆ.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807