ಉತ್ತಮ ಸಮಾಜಸೇವೆ ಅನಿವಾಸಿ ಭಾರತೀಯರ ಸಾಧನೆ ಅಭಿನಂದನೀಯ-ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ
Monday, January 8, 2024
ಮುಲ್ಕಿ: ದೇಶ, ವಿದೇಶದಲ್ಲಿ ಉತ್ತಮ ಸಮಾಜ ಸೇವೆ ಮಾಡುವ ಮೂಲಕ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿ ಕೊಡುವ ಅನಿವಾಸಿ ಭಾರತೀಯರ ಸಾಧನೆ ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಅವರು ಮುಲ್ಕಿಯ ಕಿಲ್ಪಾಡಿಯ ತಮ್ಮ ಆಶ್ರಮದಲ್ಲಿ ವಿದೇಶದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸುವ ಅನಿವಾಸಿ ಭಾರತೀಯ ಹಾಗೂ ಸಮಾಜ ಸೇವಕ ಶೇಕ್ ವಹೀದ್ ರವರನ್ನು ತಮ್ಮ ಆಶ್ರಮದ ವತಿಯಿಂದ ಗೌರವಿಸಿ ಮಾತನಾಡಿದರು. ಅವರು ಮಾತನಾಡಿ ಶೇಕ್ ವಹೀದ್ ರವರ ಸಮಾಜ ಸೇವೆ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ ಗುರುಪ್ರಸಾದ್ ಭಟ್ ಮುಂಡ್ಕೂರು ಮತ್ತಿತರರು ಉಪಸ್ಥಿತರಿದ್ದರು