ದೇವಸ್ಥಾನದ ಅಭಿವೃದ್ಧಿಗೆ ದಾನಿಗಳ ಹಾಗೂ ಭಕ್ತರ ಸಹಕಾರ ಅಗತ್ಯ-ಚಂದ್ರಹಾಸ ಶೆಟ್ಟಿ
Monday, January 8, 2024
ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಫೆಬ್ರವರಿ 22 ರಿಂದ 28ರ ವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕ್ಷೇತ್ರದಲ್ಲಿ ನಡೆಯಿತು
ಕ್ಷೇತ್ರದ ಅರ್ಚಕ ಪುರುಷೋತ್ತಮ ಭಟ್ ಆಶೀರ್ವಚನ ನೀಡಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ವಹಿಸಿ ಮಾತನಾಡಿ ಭಕ್ತರ ಹಾಗೂ ದಾನಿಗಳ ಸಹಕಾರದಿಂದ ಜಾತ್ರಾ ಮಹೋತ್ಸವ ಹಾಗೂ ದೇವಸ್ಥಾನದ ಅಭಿವೃದ್ಧಿ ಯಶಸ್ವಿಯಾಗಿ ನಡೆಯುತ್ತಿದೆ. ಶ್ರೀ ದೇವರ ಪ್ರೇರಣೆಯಂತೆ ದೇವಸ್ಥಾನದಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನಿರಂತರ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಸಭಾಭವನ ನಿರ್ಮಾಣ ಯೋಜನೆ ಹಮ್ಮಿಕೊಳ್ಳಲಾಗಿದ್ದು ಸಹಕಾರ ಇರಲಿ ಎಂದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬಾಬಾ ರಂಜನ್ ಶೆಟ್ಟಿ ಮಜಲಗುತ್ತು ಶ್ರೀಪತಿ ಭಟ್ ಪರೆಂಕಿಲ ಅತಿಕಾರಿಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಮನೋಹರ ಕೋಟ್ಯಾನ್ , ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ, ಸದಸ್ಯ ಗೋಪಿನಾಥ ಪಡಂಗ,
ಯುವಕ ಮಂಡಲದ ಉಪಾಧ್ಯಕ್ಷ ಪ್ರವೀಣ್, ಮಹಿಳಾ ಭಜನಾ ಮಂಡಳಿ ಅಧ್ಯಕ್ಷೆ ರೂಪಾ ಭಟ್ ಮತ್ತಿತರರು ಉಪಸ್ಥಿತರಿದ್ದರು
ಮೋಹನ್ ಕೋಟ್ಯಾನ್ ನಿರೂಪಿಸಿದರು