ಫೆ .17 - ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ, ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಭರದ ಸಿದ್ಧತೆ - ಮಿಥುನ್ ರೈ
Thursday, February 15, 2024
ಹಳೆಯಂಗಡಿ : ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶವು ಫೆ.17 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದ್ದು, ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದೆ.14 ಪಂಚಾಯತ್ ಹಾಗೂ ಎರಡು ಪಟ್ಟಣ ಪಂಚಾಯತ್ ಹಾಗೂ ಒಂದು ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಸದಸ್ಯರನ್ನು, ಪ್ರತಿಯೊಬ್ಬ ಕಾರ್ಯಕರ್ತರನ್ನು ಭಾಗವಹಿಸಲು ಸಿದ್ಧತೆ ನಡೆಸಲಾಗಿದೆ. ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಸಮಾವೇಶ ನಡೆಯುತ್ತಿದ್ದು ರಾಜ್ಯ ಸರಕಾರದ ಮುಖ್ಯಮಂತ್ರಿ ಸಹಿತ ಅನೇಕ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ
ರಾಜ್ಯ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಯೋಜನೆಯಿಂದ ಸರಕಾರ ಅಭಿವೃದ್ಧಿಯತ್ತ ಸಾಗುತ್ತಿದ್ದು ಕಾರ್ಯಕರ್ತರಿಗೆ ಮತ್ತಷ್ಟು ಬಲ ಬಂದಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿದರು.
ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾ ಗೊಷ್ಠಿಯಲ್ಲಿ ಮಾತನಾಡಿದರು.ಸರಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ನೋಂದಾವಣೆ ಮಾಡಿದ ಕೀರ್ತಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಸಲ್ಲುತ್ತದೆ ಬಿಜೆಪಿಯವರು ಬಾಯಲ್ಲಿ ಧರ್ಮದ ಪ್ರಚಾರ ಮಾಡುತ್ತಿದ್ದರೆ ನಾವು ಗ್ಯಾರಂಟಿ ಯೋಜನೆ ಮೂಲಕ ಗೆಲುವು ಸಾಧಿಸಿದ್ದೇವೆ ಹಸಿವು ಮುಕ್ತ ಕರ್ನಾಟಕ ಯೋಜನೆ ಯಶಸ್ಸಾಗಿದೆ. ಸಮಾವೇಶಕ್ಕೆ ಕ್ಷೇತ್ರದಿಂದ 55 ಬಸ್ಸುಗಳ ವ್ಯವಸ್ಥೆಯಾಗಿದ್ದು ಸಮಾವೇಶವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕೋ ಆರ್ಡಿನೇಟರ್ ಎಚ್ ವಸಂತ್ ಬರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ನಾಯಕರಾದ ಅಬ್ದುಲ್ ಖಾದರ್, ಬಾಲಚಂದ್ರ ಕಾಮತ್, ಧರ್ಮಾನಂದ ಶೆಟ್ಟಿಗಾರ್,ಮತ್ತಿತರರು ಉಪಸ್ಥಿತರಿದ್ದರು