ವಿಶ್ವಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
Tuesday, March 19, 2024
ಹಳೆಯಂಗಡಿ : ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ.ನೆಹರು ಯುವ ಕೇಂದ್ರ ಮಂಗಳೂರು ಇವರ ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ)ತೋಕೂರು, ಹಳೆಯಂಗಡಿ ಇದರ ಮಹಿಳಾ ಕಾರ್ಯಕಾರಿ ಸಮಿತಿಯ ಆಶ್ರಯದಲ್ಲಿ ಮಾ. 17 ರ ರವಿವಾರದಂದು ಸ್ಪೋರ್ಟ್ಸ್ ಕ್ಲಬ್ ನ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮ ವು ನಡೆಯಿತು.
ಶ್ರೀ ನಾರಾಯಣ ಸನಿಲ್ ಸರಕಾರಿ ಪದವಿಪೂರ್ವ ಕಾಲೇಜು ಹಳೆಯಂಗಡಿ ಇಲ್ಲಿನ ಉಪನ್ಯಾಸಕಿ ಶ್ರೀಮತಿ ಶುಭಲಕ್ಷ್ಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಹಿಳಾ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕ್ರೀಡಾಪಟು ಶ್ರೀಮತಿ ಸುಜಾತ ಸುವರ್ಣ ಅವರು ಮಹಿಳೆಯರ ಶ್ರೆಯೋಭಿವೃದ್ಧಿಯ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.
ವೇದಿಕೆಯಲ್ಲಿ ಸ್ಪೋರ್ಟ್ಸ್ ಕ್ಲಬ್ ನ ಗೌರವಾಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷ ಜಗದೀಶ್ ಕುಲಾಲ್ , ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಯಶೋದ ದೇವಾಡಿಗ ಉಪಸ್ಥಿತರಿದ್ದರು.
ಸಂಸ್ಥೆಯ ಮಹಿಳಾ ಕಾರ್ಯಕಾರಿ ಸಮಿತಿಯ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀಮತಿ ಪುಷ್ಪಾ ದೇವಾಡಿಗ, ಶ್ರೀಮತಿ ವಾರಿಜಾ, ಶ್ರೀಮತಿ ಜಯ ಮೂಲ್ಯ ಹಾಗೂ ಕುಮಾರಿ ನಿಶ್ಮಿತಾ ಇವರನ್ನು ಶಾಲು ಹೊದೆಸಿ, ಫಲ ಪುಷ್ಪ ವಿತರಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಶ್ರೀಮತಿ ಪ್ರಮೀಳಾ ಹರೀಶ್ ಮತ್ತು ಶ್ರೀಮತಿ ಅರ್ಚನಾ ಪ್ರಾರ್ಥಿಸಿದರು. ಮಹಿಳಾ ಕಾರ್ಯಾಧ್ಯಕ್ಷೆ ಯಶೋದಾ ದೇವಾಡಿಗ ಸ್ವಾಗತಿಸಿದರು. ಮಹಿಳಾ ಜೊತೆ ಕಾರ್ಯದರ್ಶಿ ಶ್ರೀಮತಿ ಸುರೇಖಾ ವಂದಿಸಿದರು.
ಮಹಿಳಾ ಸದಸ್ಯೆಯರಾದ ಶ್ರೀಮತಿ ಪವಿತ್ರಾ, ಶ್ರೀಮತಿ ಪ್ರಮೀಳಾ ನವೀನ್, ಶ್ರೀಮತಿ ಪ್ರಮೀಳಾ ಹರೀಶ್, ಶ್ರೀಮತಿ ಗೀತಾ ಶೆಟ್ಟಿಗಾರ್ ಮತ್ತು ಕುಮಾರಿ ಕಾವ್ಯ ಸನ್ಮಾನಿತರನ್ನು ಪರಿಚಯಿಸಿದರು.
ಸ್ಪೋರ್ಟ್ಸ್ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು ಸದಸ್ಯೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಕುಮಾರಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.