ಶ್ರೀ ಕ್ಷೇತ್ರ ಕಟೀಲಿಗೆ ಕ್ಯಾ.ಬ್ರಿಜೇಶ್ ಚೌಟ ಭೇಟಿ
Saturday, March 16, 2024
ಕಟೀಲು:ದಕ್ಷಿಣಕನ್ನಡ ಜಿಲ್ಲಾ ಲೋಕಸಭಾ ಅಭ್ಯರ್ಥಿಯಾಗಿ ಘೋಷಿಲ್ಪಟ್ಟ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕಟೀಲು ದೇವಳದ ಅರ್ಚಕ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ ಅವರು ಕ್ಯಾ.ಬೃಜೇಶ್ ಚೌಟ ಅವರಿಗೆ ಶ್ರೀ ದೇವರ ಪ್ರಸಾದ ನೀಡಿ ಕ್ಷೇತ್ರದ ವತಿಯಿಂದ ಗೌರವಿಸಿದರು.ನಂತರ
ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನ,ಭಂಡಾರ ಚಾವಡಿಗೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಪಕ್ಷದ ಜಿಲ್ಲಾ ಪ್ರಮುಖರುಗಳು ಮೂಡಬಿದಿರೆ ಮಂಡಲದ ಪ್ರಮುಖರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.