ಮಟ್ಟಿ ಕ್ಷೇತ್ರದಲ್ಲಿ ಧನ್ಯೋತ್ಸವ ಕಾರ್ಯಕ್ರಮ
Thursday, March 7, 2024
ಕೈಕಂಬ :ಮಳಲಿ ಮಟ್ಟಿ ಜೋಗಿಮಠ ಶ್ರೀ ಕಾಲಭೈರವ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ ಫೆ 26 ತನಕ ನಡೆದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆದಿದ್ದು,ಹಗಲು ರಾತ್ರಿ ಎನ್ನದೆ ಶ್ರಮಿಸಿದ ಭಕ್ತಜನರಿಗೆ ಕೃತಜ್ಞತೆ ಸಲ್ಲಿಸುವ ಧನ್ಯೋತ್ಸವ ಕಾರ್ಯಕ್ರಮವು ಮಳಲಿ ಮಟ್ಟಿಯ ಕ್ಷೇತ್ರದಲ್ಲಿ ನಡೆಯಿತು.ಧನ್ಯೋತ್ಸವ ಕಾರ್ಯಕ್ರಮದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಕಿರಣ್ ಪಕ್ಕಳಪೆರ್ಮಕಿಗುತ್ತು ಅವರು ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸರ್ವರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಸಂದರ್ಭ ಆಡಳಿತ ಮೊಕ್ತೇಸರ ಗಂಗಾಧರ ಜೋಗಿ,ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶೇಖರ್ ಜೋಗಿ,ಬ್ರಹ್ಮ ಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸತೀಶ್ ಜೋಗಿ ಮಾಲೆಮಾರ್,ಕಾರ್ಯಾಧ್ಯಕ್ಷ ಚಂದ್ರಹಾಸ ಶೆಟ್ಟಿ ನಾರಳ,ಪ್ರಧಾನ ಕಾರ್ಯದರ್ಶಿ ಹರೀಶ್ ಮಟ್ಟಿ,ಕೋಶಾಧಿಕಾರಿ ಸೋಹನ್ ಅತಿಕಾರಿ,ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು,ಗಣ್ಯಾತೀಗಣ್ಯರು,ಸಂಘ ಸಂಸ್ಥೆಗಳ ಪ್ರಮುಖರುಗಳು,ಸಮಿತಿಗಳ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಜಯಕರ ಶೆಟ್ಟಿ ಸ್ವಾಗತಿಸಿದರು.ಸತೀಶ್ ಶೆಟ್ಟಿ ಕಂದಾವರ ಧನ್ಯವಾದವಿತ್ತರು.