ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ
Tuesday, March 19, 2024
ಸುರತ್ಕಲ್: ದಕ್ಷಿಣಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೊರಡಿಸಿದ ಆದೇಶದಲ್ಲಿ ಸರಕಾರದ ಅಧೀನಕಾರ್ಯದರ್ಶಿಯವರು ಸುಬ್ರಹ್ಮಣ್ಯ ಪ್ರಸಾದ್ ಅವರ ಆಯ್ಕೆಯನ್ನು ಪ್ರಕಟಿಸಿದ್ದಾರೆ.
ಸುಬ್ರಹ್ಮಣ್ಯ ಪ್ರಸಾದ್ ಅವರು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿರುತ್ತಾರೆ. ಅಲ್ಲದೆ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡಿರುತ್ತಾರೆ.