-->

ಕಾಂಗ್ರೆಸ್ ಸರಕಾರದಿಂದ ಪಂಚ ಗ್ಯಾರಂಟಿಗಳ ಮೂಲಕ ಜನಪರ ಆಡಳಿತ- ಮಿಥುನ್ ರೈ

ಕಾಂಗ್ರೆಸ್ ಸರಕಾರದಿಂದ ಪಂಚ ಗ್ಯಾರಂಟಿಗಳ ಮೂಲಕ ಜನಪರ ಆಡಳಿತ- ಮಿಥುನ್ ರೈ


ಹಳೆಯಂಗಡಿ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡುತ್ತಿದ್ದು ಪಂಚ ಗ್ಯಾರಂಟಿಗಳ ಮೂಲಕ ಜನರ ಮನಸ್ಸು ಗೆದ್ದಿದೆ. ಸರ್ಕಾರದ ಯೋಜನೆಗಳಿಂದ ಬಡವರ ಕಣ್ಣೀರೊರೆಸುವ ಕಾರ್ಯವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಿಥುನ್ ರೈ ಹೇಳಿದರು. ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಚುನಾವಣೆ ಬರುವಾಗ ಬಿಜೆಪಿಯವರು ಜಾತಿಯ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಬಿಜೆಪಿಗರಲ್ಲಿ ಅಭಿವೃದ್ಧಿ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಹೇಳಿದ ಮಿಥುನ್ ರೈ ರಾಜ್ಯದಲ್ಲಿ ಯಾವುದೇ ಮೋದಿ ಅಲೆ ಇಲ್ಲ ಸಿದ್ದರಾಮಯ್ಯ ನೇತೃತ್ವದ ಗ್ಯಾರಂಟಿ ಅಲೆ ಮೂಲಕ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೇಹಾ ಕೊಲೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಿಥುನ್ ರೈ ಕೊಲೆ ಮಾಡಿದವರನ್ನು ಕ್ಷಮಿಸಲು ಸಾಧ್ಯವೇ ಇಲ್ಲ, ಆದರೆ ಇದಕ್ಕೆ ರಾಜಕೀಯ ಬಣ್ಣ ಬೇಡ ಎಂದು ಹೇಳಿದರು

ಪತ್ರಿಕಾಗೋಷ್ಠಿಯಲ್ಲಿ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ವೀಕ್ಷಕ ವಸಂತ್ ಬರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮೂಡಬಿದ್ರೆ ಕಾಂಗ್ರೆಸ್ ವೀಕ್ಷಕ ಗುರುರಾಜ್ ಎಸ್ ಪೂಜಾರಿ, ಮಂಜುನಾಥ ಕಂಬಾರ, ಬಾಲಚಂದ್ರ ಕಾಮತ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ ಮತ್ತಿತರರು ಉಪಸ್ಥಿತರಿದ್ದರು

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807