-->

ಬಾರ್ದಿಲ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ಬಾರ್ದಿಲ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವಬಜಪೆ:ಕುಪ್ಪೆಪದವು ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನದಲ್ಲಿ ಆದಿತ್ಯವಾರದಂದು ಬೆಳಿಗ್ಗೆ 10:20ಕ್ಕೆ ಮಿಥುನ ಲಗ್ನ ಸುಮುಹೂರ್ತದಲ್ಲಿ ಶ್ರೀ ಸಾಂಬಸದಾಶಿವ ದೇವರಿಗೆ ,ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕಲಶಾಭಿಷೇಕವು ಬ್ರಹ್ಮಶ್ರೀ ಡಾ.ದೇರೆಬೈಲು ಶಿವಪ್ರಸಾದ್ ತಂತ್ರಿವರೇಣ್ಯರ ನೇತೃತ್ವದಲ್ಲಿ ಶ್ರೀದೇವಳದ ಪ್ರಧಾನ ಅರ್ಚಕರಾದ ಶ್ರೀರಾಘವೇಂದ್ರ ಕಾರಂತರ ಸಹಯೋಗದೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಈ ಸಂದರ್ಭ ಶ್ರೀಕ್ಷೇತ್ರ ಬಾರ್ದಿಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ  ಸೋಮಶೇಖರ ಶೆಟ್ಟಿ,ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಪ್ರವೀಣ್ ಆಳ್ವ ಗುಂಡ್ಯ ಕುಲವೂರು,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಜೈನ್ ,ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್ ಪಾಕಾಜೆ,
ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು  ಮತ್ತು ಬ್ರಹ್ಮ ಕಲಶೋತ್ಸವ ಸಮಿತಿಯ  ಪದಾಧಿಕಾರಿಗಳು, ಉಪಸಮಿತಿಗಳ ಸಂಚಾಲಕರು,ವಿವಿಧ ಸಂಘಟನೆಗಳ ಪ್ರಮುಖರು, ಗಣ್ಯರು ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807