-->

 ಏ.3 - ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ನಾಮಪತ್ರ ಸಲ್ಲಿಕೆ

ಏ.3 - ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ನಾಮಪತ್ರ ಸಲ್ಲಿಕೆ


ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಗ್ಗೆ 9.30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಕಾರ್ಯಕರ್ತರು ಈ ಸಂದರ್ಭ ಭಾಗವಹಿಸುವರು ಎಂದು ತಿಳಿಸಿದರು.
ಕಾಂಗ್ರೆಸ್ ಬಡ, ಹಿಂದುಳಿದ ವರ್ಗದವರ ಪಕ್ಷವಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ದುಡಿಯುತ್ತಿದೆ. ಕಾಂಗ್ರೆಸ್ ಸಂಸದರ ಕಾಲದಿಂದ ಜಿಲ್ಲೆಯ ಅಭಿವೃದ್ಧಿಯ ಚಿತ್ರಣ ಬದಲಾಗಿದ್ದು, ಮೂರು ದಶಕಗಳಿಂದ ಬಿಜೆಪಿ ಸಂಸದರು ಗೆಲ್ಲುವ ಮೂಲಕ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಟೀಕಿಸಿದರು.
ಈ ಸಂದರ್ಭ ಮುಡಾ ಮಾಜಿ ಅಧ್ಯಕ್ಷ  ಇಬ್ರಾಹಿಂ ಕೊಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಮಾಜಿ ಮೇಯರ್ ಮಹಾಬಲ ಮಾರ್ಲ, ಪದ್ಮನಾಭ ಕೋಟ್ಯಾನ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ ಮತ್ತಿತರರು ಉಪಸ್ಥಿತರಿದ್ದರು.

Advertise in articles 1

advertising articles 2

Advertise under the article

ಕಾರ್ಯಕ್ರಮಗಳ ನೇರ ಪ್ರಸಾರ, ಚಿತ್ರೀಕರಣ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 8618554807