ಶಿಬರೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ
Thursday, April 4, 2024
ಕಟೀಲು: ಜೀರ್ಣೋದ್ದಾರಗೊಂಡಿರುವ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಎ.22 ರಿಂದ ಎ.30 ರ ತನಕ ಶ್ರೀ ಉಳ್ಳಾಯ,ಶ್ರೀಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ ಹಾಗೂ ಅಷ್ಟಪವಿತ್ರ ನಾಗಮಂಡಲ ಸೇವೆ ಮತ್ತು ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಜರುಗಲಿದ್ದು,ಆಪ್ರಯುಕ್ತ ಇಂದು ತಂತ್ರಿಗಳಾದ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಚಪ್ಪರ ಮುಹೂರ್ತ ವನ್ನು ಧಾರ್ಮಿಕ ಮುಂದಾಳು ಶೆಡ್ಡೆ ಮಂಜುನಾಥ ಭಂಡಾರಿ ಯವರು ನೆರವೇರಿಸಿದರು.
ಕ್ಷೇತ್ರದಲ್ಲಿ ಎ.22 ರಿಂದ ಎ.26 ರ ತನಕ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿದೆ. ಎ.26 ರ ಶುಕ್ರವಾರದಂದು ಬೆಳಿಗ್ಗೆ 10.45 ಕ್ಕೆ ಒದಗುವ ಮಿಥುನ ಲಗ್ನ ಸುಮುಹೂರ್ತದಲ್ಲಿ ಪಲಿಮಾರು ಮಠದ ಶ್ರೀ ಶ್ರೀಅಷ್ಟೋತ್ತರಶತ ಶ್ರೀ ವಿದ್ಯಾಧೀಶ ತೀರ್ಥ ಶ್ರೀ ಪಾದರ ದಿವ್ಯ ಸಾನಿಧ್ಯದಲ್ಲಿ ಶ್ರೀಕ್ಷೇತ್ರ ಕಟೀಲಿನ ಆಸ್ರಣ್ಣ ಬಂಧುಗಳ ಉಪಸ್ಥಿತಿಯಲ್ಲಿ ,ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿ,ಕೃಷ್ಣರಾಜ ತಂತ್ರಿ ಗಳ ಅಮೃತ ಹಸ್ತದಿಂದ ಶ್ರೀ ಉಳ್ಳಾಯ,ಶ್ರೀಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ ಹಾಗೂ ಅದೇ ದಿನ ರಾತ್ರಿ 9 ರಿಂದ ಸಗ್ರಿ ಶ್ರೀಗೋಪಾಲಕೃಷ್ಣ ಸಾಮಗರ ನೇತೃತ್ವದಲ್ಲಿ ಹಾಗೂ ಮದ್ದೂರು ಶ್ರೀ ಕೃಷ್ಣ ಪ್ರಸಾದ್ ವೈದ್ಯ ಬಳಗದವರ ಸಹಯೋಗದೊಂದಿಗೆ ಅಷ್ಟಪವಿತ್ರ ನಾಗಮಂಡಲ ಸೇವೆ ಮತ್ತು ಎ.27 ರಿಂದ ಎ.30 ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರುಗಲಿದೆ.
ಕ್ಷೇತ್ರದಲ್ಲಿ ಪ್ರತಿದಿನ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ , ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅನ್ನ ಸಂತರ್ಪಣೆಯು ನಡೆಯಲಿದೆ.
ಕ್ಷೇತ್ರದಲ್ಲಿ ಇಂದು ನಡೆದ ಚಪ್ಪರ ಮುಹೂರ್ತ ಕಾರ್ಯಕ್ರಮದಲ್ಲಿ
ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಪ್ರಭಾಕರ ಎಸ್ ಶೆಟ್ಟಿ ಕೋಂಜಾಲಗುತ್ತು, ಕುಡುಂಬೂರುಗುತ್ತು ಜಯರಾಮ ಶೆಟ್ಟಿ, ಜೀರ್ಣೋದ್ಧಾರ ಮತ್ತು ಬ್ರಹ್ಮಕುಂಭಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಪ್ರದ್ಯುಮ್ನ ರಾವ್ ಕೈಯೂರುಗುತ್ತು, ಬ್ರಹ್ಮಕುಂಭಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮೊಕೇಸರ ಎಂ ಮಧುಕರ ಅಮೀನ್, ಜೀರ್ಣೋದ್ಧಾರ ಸಮಿತಿ ಮತ್ತು ಬ್ರಹ್ಮಕುಂಭಾಭಿಷೇಕ ಸಮಿತಿಯ ಪ್ರಧಾನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಕೋರ್ಯಾರು, ತುಕರಾಮ ಶೆಟ್ಟಿ ಪರ್ಲಬೈಲ್ ಗುತ್ತು, ಶಿವಾನಂದ ಶೆಟ್ಟಿ ಪಡುಮನೆ, ಸೂರಿಂಜೆ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ, ಪುರಂದರ ಎಂ ಶೆಟ್ಟಿ, ಕಾಂತಪ್ಪ ಸಾಲಿಯಾನ್, ದಿವಾಕರ ಸಾಮಾನಿ ಚೇಳಾರ್ ಗುತ್ತು, ಸ್ವಾಗತ ಸಮಿತಿಯ ಜಿತೇಂದ್ರ ಶೆಟ್ಟಿ ಕೋರ್ಯಾರುಗುತ್ತು, ಸ್ವಯಂಸೇವಕ ಸಮಿತಿಯ ಗಿರೀಶ್ ಶೆಟ್ಟಿ ಪಡುಮನೆ, ಪ್ರಚಾರ ಮತ್ತು ಅಮಂತ್ರಣ ಸಮಿತಿಯ ವಿನೀತ್ ಶೆಟ್ಟಿ ಕೊರ್ಯಾರು ಹೊಸಮನೆ, ಅನ್ನ ಸಂತರ್ಪಣೆ ಸಮಿತಿಯ ಕಾರ್ಯಾಧ್ಯಕ್ಷ ಸುರೇಂದ್ರ ಶೆಟ್ಟಿ ದೇಂದೊಟ್ಟು, ಮಾದ್ಯಮ ಸಮಿತಿಯ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಮಾತೃ ಸಮಿತಿಯ ಪ್ರಧಾನ ಕಾರ್ಯದರ್ಶಿ ಆಶಾ ಶೆಟ್ಟಿ ಪಡುಮನೆ, ಸಾಂಸ್ಕೃತಿಕ ಸಮಿತಿಯ ವಿಜೇಶ್ ಶೆಟ್ಟಿ, ಅನ್ನಸಂತರ್ಪಣೆ ಸಮಿತಿಯ ಜಗದೀಶ್ ಶೆಟ್ಟಿ, ಉಗ್ರಾಣ ಸಮಿತಿ ದಯಾನಂದ ದೇವಾಡಿಗ, ಹೊರೆಕಾಣಿಕೆ ಸಮಿತಿಯ ಬಾಲಕೃಷ್ಣಕುಲಾಲ್, ಆರೋಗ್ಯ ಮತ್ತು ನೈರ್ಮಲ್ಯ ಸಮಿತಿಯ ಸುಜಾತ ಶೆಟ್ಟಿ, ಪ್ರಸಾದ ವಿತರಣಾ ಸಮಿತಿಯ ಸುಧಾಕರ ಶೆಟ್ಟಿ ಶಿಬರೂರುಗುತ್ತು, ವಾಹನ ಪಾರ್ಕಿಗ್ ಸಮಿತಿಯ ದಿನಕರ ಕೈಯೂರು, ಅಲಂಕಾರ ಸಮಿತಿಯ ಭುವನೇಶ್ ಆಚಾರ್ಯ, ವಸತಿ ಸಮಿತಿ ಸಂದೀಪ್ ಶೆಟ್ಟಿ, ಮಾತೃ ಸಮಿತಿಯ ಅಧ್ಯಕ್ಷೆ ಶ್ಯಾಮಲ ಪ್ರಭಾಕರ ಶೆಟ್ಟಿ ಶಿಬರೂರುಗುತ್ತು, ಸಂಚಾಲಕಿ ಸುಷಾಮ ಯು ಶೆಟ್ಟಿ ಶಿಬರೂರುಗುತ್ತು, ಅರ್ಥಿಕ ಸಮಿತಿ ಪ್ರವೀಣ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಎ.22 ರಿಂದ ಎ.30 ರ ತನಕ ಶ್ರೀ ಉಳ್ಳಾಯ,ಶ್ರೀಕೊಡಮಣಿತ್ತಾಯ ಮತ್ತು ಪರಿವಾರ ದೈವಗಳಿಗೆ ಬ್ರಹ್ಮಕುಂಭಾಭಿಷೇಕ ಹಾಗೂ ಅಷ್ಟಪವಿತ್ರ ನಾಗಮಂಡಲ ಸೇವೆ ಮತ್ತು ಜಾತ್ರಾ ಮಹೋತ್ಸವ