ಎಕ್ಕಾರು:ಟಿಪ್ಪರ್ - ಸ್ಕೂಟರ್ ಡಿಕ್ಕಿ,ಸವಾರನಿಗೆ ಗಂಭೀರ ಗಾಯ
Wednesday, April 24, 2024
ಬಜಪೆ: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಜಪೆ -ಕಟೀಲು ರಾಜ್ಯ ಹೆದ್ದಾರಿಯ ಎಕ್ಕಾರು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಸ್ಕೂಟರ್ ಸವಾರ ಮಂಗಳೂರು ಮೂಲದ ವ್ಯಕ್ತಿ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಜಪೆ ಕಡೆಯಿಂದ ಕಟೀಲು ಕಡೆಗೆ ಸಂಚರಿಸುತ್ತಿದ್ದ ಟಿಪ್ಪರ್ ,ಕಟೀಲು ಕಡೆಯಿಂದ ಬಜಪೆ ಕಡೆಗೆ ಸಂಚರಿಸುತ್ತಿದ್ದ ಸ್ಕೂಟರ್ ಗೆ ಡಿಕ್ಕಬಹೊಡೆದಿದೆ.
ಅಪಘಾತ ಸಂಭವಿಸಿದ ಸಂದರ್ಭ ಕೆಲ ಕಾಲ ಕಟೀಲು - ಬಜಪೆ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಗೊಂಡಿತು.
ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.