
ಜೂ.1 - ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ ಸಮಾರಂಭ
Wednesday, May 29, 2024
ಮೂಲ್ಕಿ:ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘ (ರಿ),ನ ಆಶ್ರಯದಲ್ಲಿ ಸಂಸ್ಥೆಯ ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ ಹಾಗೂ ಶ್ರೀ ನಾರಾಯಣ ಗುರು ಸೇವಾ ದಳದ ಸಹಯೋಗದೊಂದಿಗೆ ಜೂನ್ 1 ರ ಶನಿವಾರ ಮಧ್ಯಾಹ್ನ 2.30ಕ್ಕೆ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ವ್ಯಾಪ್ತಿಯ 3ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಸಮಾರಂಭವು ಸಂಘದ ಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರಗಲಿದೆ. ಸಭಾಧ್ಯಕ್ಷತೆಯನ್ನು ಬಿಲ್ಲವ ಸಮಾಜ ಸೇವಾ ಸಂಘ (ರಿ.), ಮೂಲ್ಕಿಯ ಅಧ್ಯಕ್ಷ ಎಂ. ಪ್ರಕಾಶ್ ಸುವರ್ಣ ವಹಿಸಲಿದ್ದು ಹಳೆಯಂಗಡಿಯ ಬಿಲ್ಲವ ಸಮಾಜ ಸೇವಾ ಸಂಘದ ಕಟ್ಟಡ ಸಮಿತಿಯ
ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಸಾಲ್ಯಾನ್ ಹಳೆಯಂಗಡಿ,ಮೂಲ್ಕಿಯ ಕೆ.ಎಸ್. ರಾವ್ ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ,) ನ ಅಧ್ಯಕ್ಷ ಮಹಾಬಲ ಎನ್. ಸನಿಲ್ ಹಾಗೂ ಉದ್ಯಮಿ ವಾಸು ಪೂಜಾರಿ ಚಿತ್ರಾಪು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.