ಪುನರೂರು :ಶಾಲೆ ಮುಚ್ಚಲು ಮುಂದಾದ ಆಡಳಿತ ಮಂಡಳಿ
Thursday, May 30, 2024
ಕಿನ್ನಿಗೋಳಿ:ಮಾಜಿ ಶಾಸಕ ಸಂಜೀವನಾಥ್ ಐಕಳ ಪ್ರಾರಂಭಿಸಿದ ಪುನರೂರು ಭಾರತ್ ಮಾತಾ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆ ಮುಚ್ಚಲು ಆಡಳಿತ ಮಂಡಳಿ ಮುಂದಾಗಿದೆ, ಆಡಳಿತ ಮಂಡಳಿಯ ನಿರುತ್ಸಾಹದಿಂದ ಶಾಲೆ ಮುಂದುವರಿಯುವುದು ಕಷ್ಟ ಸಾದ್ಯವಾಗಿದೆ. ಮೂಲ್ಕಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದ ಸಂಜೀವನಾಥ ಐಕಳ ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಭಾರತ್ ಮಾತ ಶಾಲೆಯನ್ನು ಪ್ರಾರಂಭಿಸುದ್ದು, ತನ್ನಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ಶಾಲೆಗೆ ಸುರಿದಿದ್ದರು, ಸಂಜೀವನಾಥ ಐಕಳ ತನಗೆ ಬರುತ್ತಿದ್ದ ವೇತನವನ್ನು ಶಾಲೆಗೆ ನೀಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕರಿಸಿದ್ದರು, ಈ ಶಾಲೆಯಲ್ಲಿ ಕಲಿತ ಅನೇಕರು ಪ್ರತಿಷ್ಟಿತ ಹುದ್ದೆಯಲ್ಲಿದ್ದಾರೆ, ಹೆಚ್ಚಿನ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕ್ಷೀಣವಾಗಿ ಮುಚ್ಚಿದರೆ ಇಲ್ಲಿ ಕಳೆದ ಬಾರಿ ,7 ನೇ ತರಗತಿವರೆ 64 ಮಕ್ಕಳು ವಿದ್ಯಾಭ್ಯಾಸ ಮಾಡಿದ್ದು, ಈ ಬಾರಿಯೂ ಸುಮಾರು 20 ಮಕ್ಕಳು ಒಂದನೇ ತರಗತಿಗೆ ಸೇರುವವರಿದ್ದರು, ಆದರೆ ಪ್ರಸ್ತುತ ಕಲಿಯುತ್ತಿದ್ದ ಎಲ್ಕಾ ಮಕ್ಕಳು ಪೋಷಕರಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿ ವೀಣಾ ಅವರು ಕರೆ ಮಾಡಿ ಶಾಲೆ ಮುಚ್ಚುತ್ತಿದ್ದೇವೆ ನಿಮ್ಮ ಮಕ್ಕಳನ್ನು ಬೇರೆ ಕಡೆಗೆ ಸೇರಿಸಿ ಎಂದಿದ್ದಾರೆ.
ಶಾಲೆಗೆ ಬೀಗ ಹಾಕಿದ ಆಡಳಿತ ಮಂಡಳಿ ಕಾರ್ಯದರ್ಶಿ
ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ವೀಣಾ ಶಾಲೆಗೆ ಬೀಗ ಹಾಗಿ ಮಕ್ಕಳನ್ನು ಶಾಲೆಯ ಜಗಲಿಯಲ್ಲಿ ಕುಳ್ಳಿರಿಸಿದ್ದಾರೆ, ಇಲಾಖಾ ಅಧಿಕಾರಿಗಳು, ಪೋಲೀಸರು, ಮಕ್ಕಳ ಪೊಷಕರು ವಿನಂತಿಸಿದರೂ ಶಾಲೆಯ ಬೀಗ ತೆಗೆಯದೆ ಇದ್ದು, ಪೋಷಕರು ಸದ್ಯ ಇಲ್ಲಿನ ಮಕ್ಕಳ ಮತ್ತು ಶಿಕ್ಷಕರ ಜವಾಬ್ದಾರಿ ನಾವೇ ನೋಡಿಕೊಳ್ಳುತ್ತೇನೆ ಎಂದು ಲಿಖಿತವಾಗಿ ನೀಡಿದ ಬಳಿಕ ಮದ್ಯಾಹ್ನ 12.15 ಕ್ಕೆ ಶಾಲೆಯ ಬೀಗ ತೆರೆ ಮಕ್ಕಳನ್ನು ಒಳ ಬಿಡಲಾಯಿತು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
https://youtu.be/C0Fs60L4SOs?si=pBCK6xXRXV2R2Qfh