-->
ಕಟೀಲು ದೇವರಿಗೆ ಸ್ವರ್ಣಪಾದುಕೆ ಸಮರ್ಪಣೆ

ಕಟೀಲು ದೇವರಿಗೆ ಸ್ವರ್ಣಪಾದುಕೆ ಸಮರ್ಪಣೆ


ಕಟೀಲು : ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ೩೬ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀತೀರ್ಥಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವ (೧೯೭೪-೨೦೨೪) ಸುಸಂದರ್ಭದ ಸಂಸ್ಮರಣಾರ್ಥ ಶ್ರೀಕ್ಷೇತ್ರ ಕಟೀಲು ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಪಾದಾರವಿಂದಗಳಿಗೆ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ವತಿಯಿಂದ ರೂ. ೪೦.೦೦ ಲಕ್ಷ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಯಿತು.
ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ದೇವಳದ ಆನುವಂಶಿಕ ಅರ್ಚಕರಾದ ಶ್ರೀಹರಿನಾರಾಯಣದಾಸ ಆಸ್ರಣ್ಣರಿಗೆ ಹಸ್ತಾಂತರಿಸಿದರು. ಇದನ್ನು ದಿನಾಂಕ ಜೂನ್ ೧೯ರಂದು ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಈ ಸೇವೆಯನ್ನು ಶೃಂಗೇರಿ ಶ್ರೀಮಠದ ಶಿಷ್ಯರಾದ ಆಂಧ್ರಪ್ರದೇಶದ ಶ್ರೀಪೋಲಿಸೆಟ್ಟಿ ಶ್ಯಾಮ್ ಸುಂದರ್ ಇವರು ನೀಡಿರುತ್ತಾರೆ.

Ads on article

Advertise in articles 1

advertising articles 2

Advertise under the article