ಜಿ. ಪಂ. ಹಿ. ಪ್ರಾ.ಶಾಲೆ ಪಂಜ - ಶಾಲಾ ಪ್ರಾರಂಭೋತ್ಸವ
Friday, June 7, 2024
ಕಿನ್ನಿಗೋಳಿ: ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಂಜ ಇಲ್ಲಿ ಶಾಲಾ ಪ್ರಾರಂಭೋತ್ಸವವು ನಡೆಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನವೀನ್ ಸಾಲಿಯಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಎಂ ಶೆಟ್ಟಿ ಬೈಲಗುತ್ತು, ನವೀನ್ ಶೆಟ್ಟಿ ನಲ್ಯಗುತ್ತು, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ತಾರ ಶೆಟ್ಟಿ,ಶಾಲಾ ಸಹ ಶಿಕ್ಷಕಿ ಶ್ರೀಮತಿ ಪಲ್ಲವಿ, ಗೌರವ ಸಹ ಶಿಕ್ಷಕಿ ಕವಿತಾ ಮತ್ತು ಶಾಲಾ ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು
ಶಿಕ್ಷಣ ಇಲಾಖೆಯಿಂದ ಸರಬರಾಜದ ಪಠ್ಯಪುಸ್ತಕಗಳು, ಸಮವಸ್ತ್ರ , ಉದ್ಯಮಿ ಸೀತಾರಾಮ್ ಎಲ್ ಶೆಟ್ಟಿ ಮುಂಬೈ ಯವರು ಕೊಡಲ್ಪಟ ಬರವಣಿಗೆ ಪುಸ್ತಕಗಳು, ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪಂಜ, ಪ್ರಕಾಶ್ ಶೆಟ್ಟಿ ನಲ್ಯಗುತ್ತು ಮುಂಬೈ, ನವೀನ್ ಶೆಟ್ಟಿ ನಲ್ಯ ಗುತ್ತು, ಇವರ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ಗಳನ್ನು ಈ ಸಂದರ್ಭ ವಿತರಿಸಲಾಯಿತು. ಶಾಲಾ ಸಹ ಶಿಕ್ಷಕಿ ಶ್ರೀಮತಿ ವಸಂತಿ ಕೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹ ಶಿಕ್ಷಕಿ ಶ್ರೀಮತಿ ಸುನಿತಾ ಡಿಸೋಜ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಐರಿನ್ ಡಿಸೋಜ ವಂದಿಸಿದರು.