-->


ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಮತ್ತು ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ.) ಕುಪ್ಪೆಪದವು ಘಟಕ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ

ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಮತ್ತು ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ.) ಕುಪ್ಪೆಪದವು ಘಟಕ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ

ಕುಪ್ಪೆಪದವು :ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಮತ್ತು ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ.) ಕುಪ್ಪೆಪದವು ಘಟಕ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ವು ನಡೆಯಿತು.

ಯುವವಾಹಿನಿ (ರಿ.) ಕುಪ್ಪೆಪದವು ಘಟಕದ ಅಧ್ಯಕ್ಷ  ಅಕ್ಷಿತ್ ಕುಮಾರ್ ಮತ್ತು ಶಾಲಾ ನಾಯಕಿ  ಕು. ಸಾನ್ವಿ ಅವರು  ಶಾಲಾ ಪರಿಸರದಲ್ಲಿ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
 ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ  ಮಾರ್ಕ್ ಮೆಂಡೊನ್ಸಾ ಅವರು  ಮಾತನಾಡಿ ನಮ್ಮ ಮತ್ತು  ಪರಿಸರದ ಸಂಬಂಧವನ್ನು ಗಟ್ಟಿಗೊಳಿಸಿದಾಗ ಪ್ರಕೃತಿಯ ಸಂರಕ್ಷಣೆಯಾಗುತ್ತದೆ. ಪ್ರತಿದಿನ ನಾವು ಪರಿಸರದ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ ಮತ್ತು ಪ್ರಕೃತಿಯ ಉಳಿವಿನ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಾದ ಕಾಯಕದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ಥಾಪಕ ಅಧ್ಯಕ್ಷ  ಅರುಣ್ ಕುಮಾರ್ ಅಂಬೆಲೊಟ್ಟು, ಮಾಜಿ ಅಧ್ಯಕ್ಷ ಅಜಯ್ ಅಮೀನ್ ನಾಗಂದಡಿ,  ಸತೀಶ್ ಕೆ. ಎಂ.,  ಜಗದೀಶ್ ದುರ್ಗಾಕೊಡಿ, ಕಾರ್ಯದರ್ಶಿ ಶ್ರೀಮತಿ ರೇಣುಕಾ ನಿಕಟಪೂರ್ವ ಅಧ್ಯಕ್ಷೆ  ಸೌಮ್ಯಾ ಕೋಟ್ಯಾನ್, ಪರಿಸರ ಪ್ರೇಮಿ ವಿನೇಶ್ ಪೂಜಾರಿ ನಿಡ್ಡೋಡಿ (ಅರಣ್ಯ ಸಂರಕ್ಷಕ)  ಮತ್ತು ಯುವವಾಹಿನಿ ಪದಾಧಿಕಾರಿಗಳು, ಶಿಕ್ಷಕರು ಹಾಗೂ  ವಿದ್ಯಾರ್ಥಿಗಳು ಉಪಸ್ಥಿತಿರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article