ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಜೇಶ್ ಚೌಟ ಶ್ರೀಕ್ಷೇತ್ರ ಪೊಳಲಿಗೆ ಭೇಟಿ
Wednesday, June 5, 2024
ಕೈಕಂಬ : ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಜೇಶ್ ಚೌಟ ಅವರು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಳದ ಅರ್ಚಕ ಪದ್ಮನಾಭ ಭಟ್ ಪ್ರಸಾದ ನೀಡಿದರು. ದೇವಳದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವ ಭಟ್, ಶ್ರೀಕಾಂತ್ ಮಯ್ಯ ಹಾಗೂ ವೆಂಕಟೇಶ್ ನಾವಡ ಪೊಳಲಿ, ಯಶವಂತ ಕೊಟ್ಯಾನ್‌ಪೊಳಲಿ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.