ಶಿಬರೂರು ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಧೃಡಕಲಶಾಭಿಷೇಕ
Sunday, June 16, 2024
ಶಿಬರೂರು:ಶಿಬರೂರು ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಎ.22 ರಿಂದ ಎ.30 ರ ವರೆಗೆ ಶ್ರೀ ಉಳ್ಳಾಯ,ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರದೈವಗಳಿಗೆ ಬ್ರಹ್ಮಕುಂಭಾಭಿಷೇಕ ಹಾಗೂ ಅಷ್ಟಪವಿತ್ರ ನಾಗಮಂಡಲ ಸೇವೆ ಮತ್ತು ವಿಶೇಷ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ಜರುಗಿದ್ದು,ಆಪ್ರಯುಕ್ತ ಇಂದು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಧೃಡಕಲಶಾಭಿಷೇಕವು 11.28ಕ್ಕೆ ಒದಗುವ ಸಿಂಹ ಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.