-->
ತೋಕೂರಿನಲ್ಲಿ ವಿಶ್ವ ಯೋಗ ದಿನಾಚರಣೆ

ತೋಕೂರಿನಲ್ಲಿ ವಿಶ್ವ ಯೋಗ ದಿನಾಚರಣೆ

ತೋಕೂರು :ನೆಹರೂ ಯುವ ಕೇಂದ್ರ ಮಂಗಳೂರು, ಗ್ರಾಮೀಣ ಮಾಹಿತಿ ತಂತ್ರಜ್ಞಾನ ಮತ್ತು ಯುವ ಅಭಿವೃದ್ಧಿ ಕೇಂದ್ರ ತೋಕೂರು, ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ, ಮತ್ತು ಮಹಿಳಾ ಮಂಡಳ ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ 10ನೇ ವಿಶ್ವ ಯೋಗ ದಿನಾಚರಣೆಯು ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು
     ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಹರಿದಾಸ್ ಭಟ್  ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡುಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ  ಹೇಮಂತ್ ಅಮೀನ್   ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವಹಿಸಿದ್ದರು, ಯೋಗ ಶಿಕ್ಷಕರಾದ  ಉದಯ ಕುಮಾರ ರವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸವನ್ನು  ಮಾಡಲಾಯಿತು ಸುಮಾರು 40 ಯೋಗಾರ್ಥಿಗಳು ಭಾಗವಹಿಸಿದ್ದರು.
ಯುವಕ ಸಂಘದ ಅಧ್ಯಕ್ಷ  ರಮೇಶ್ ದೇವಾಡಿಗ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮಂಡಳದ ಅಧ್ಯಕ್ಷೆ  ಶ್ರೀಮತಿ ಪ್ರೇಮಲತಾ ಶೆಟ್ಟಿಗಾರ್ ವಂದಿಸಿದರು.

Ads on article

Advertise in articles 1

advertising articles 2

Advertise under the article