ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮ ಯಕ್ಷಗಾನ - ಗಿರೀಶ್ ಶೆಟ್ಟಿ ಕಟೀಲು
Sunday, June 16, 2024
ಎಕ್ಕಾರು :ಯಕ್ಷ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವುದರೊಂದಿಗೆ ಜೀವನ ಶಿಸ್ತಿನ ಅರಿವನ್ನು ಮೂಡಿಸುತ್ತದೆ. ಸಮಾಜ ಮುಖಿ ಚಿಂತನೆಯನ್ನು ಬಿತ್ತುತ್ತಾ ತಿಳುವಳಿಕೆಯನ್ನು ಹೆಚ್ಚಿಸುವ ಮಾಧ್ಯಮವಾಗಿ ಯಕ್ಷಗಾನವು ಒಂದು ಅದ್ಬುತ ಕಲೆ ಎಂದು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ನ ಕಟೀಲು ಎಕ್ಕಾರು ಘಟಕದ ಅಧ್ಯಕ್ಷ ಗಿರೀಶ್ ಶೆಟ್ಟಿ ಕಟೀಲು ಹೇಳಿದರು. ಅವರು ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರಿನಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇದರ ವತಿಯಿಂದ ನಡೆಯುವ ಎರಡನೇ ವರ್ಷದ ಯಕ್ಷ ಶಿಕ್ಷಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಎಕ್ಕಾರು ಬಂಟರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಅಧ್ಯಕ್ಷರು ಬಂಟರ ಸಂಘ ಎಕ್ಕಾರು ನೆರವೇರಿಸಿದರು. ಯಕ್ಷ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣಕ್ಕೆ ಸಂಬಂಧಿಸಿ ಪುಸ್ತಕ ಹಾಗೂ ಲೇಖನ ಸಾಮಗ್ರಿ ಗಳನ್ನು ಈ ಸಂದರ್ಭ ವಿತರಿಸಲಾಯಿತು.
ಈ ಸಂದರ್ಭ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸುದೀಪ್ ಅಮೀನ್ , ಎಕ್ಕಾರು ಘಟಕದ ಸಂಚಾಲಕರುಗಳಾದ ಸತೀಶ್ ಶೆಟ್ಟಿ , ನಿತೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಭರತೇಶ ಶೆಟ್ಟಿ , ಎಕ್ಕಾರು ಗ್ರಾ.ಪಂ ಸದಸ್ಯ ವಿಕ್ರಮ್ ಮಾಡ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದಿರಾ ಎನ್ ರಾವ್, ನೋಡಲ್ ಶಿಕ್ಷಕರಾದ ಡಾ. ಅನಿತ್ ಕುಮಾರ್ ,ಹಿರಿಯ ಶಿಕ್ಷಕರಾದ ಪೂರ್ಣಿಮಾ ಎಚ್ಎಂ, ರಾಜಶ್ರೀ ಕೆ, ಶ್ರೀಮತಿ ವಿದ್ಯಾಲತಾ, ಶ್ರೀಮತಿ ವಿದ್ಯಾ ಗೌರಿ, ಶ್ರೀಮತಿ ರಮ್ಯಾ, ಶ್ರೀಮತಿ ಜಯಂತಿ, ಕುಮಾರಿ ನಿಶ್ಮಿತಾ ಹಾಗೂ ಪೋಷಕರು ಉಪಸ್ಥಿತರಿದ್ದರು.
ರಾಜೇಂದ್ರ ಪ್ರಸಾದ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಘಟಕದ ಸಂಚಾಲಕ ನಿತೇಶ್ ಎಕ್ಕಾರು ಧನ್ಯವಾದ ವಿತ್ತರು. ಶಿಕ್ಷಕಿ ಶ್ರೀಮತಿ ಚಿತ್ರಾಶ್ರೀ ಕಾರ್ಯಕ್ರಮ ನಿರೂಪಿಸಿದರು.
ಯಕ್ಷ ಶಿಕ್ಷಕ ರಾಮ್ ಪ್ರಕಾಶ್ ಕಲ್ಲೂರಾಯ ವಿದ್ಯಾರ್ಥಿಗಳಿಗೆ ಪ್ರಾರಂಭಿಕ ಹೆಜ್ಜೆಗಳನ್ನ ಕಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.120 ವಿದ್ಯಾರ್ಥಿಗಳು ಯಕ್ಷ ಶಿಕ್ಷಣದಲ್ಲಿ ಭಾಗವಹಿಸಿದರು.