ಗಾಂಜಾ ಸೇವನೆ ಮಾಡುತ್ತಿದ್ದ ಮೂವರು ಬಜಪೆ ಪೊಲೀಸರ ವಶಕ್ಕೆ
Friday, July 19, 2024
ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ ,ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38),ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59)ಹಾಗೂ ಚಿಕ್ಕ ಮಗಳೂರು ಜಿಲ್ಲೆಯ ಎನ್ .ಅರ್ ಪುರ ತಾಲೂಕಿನ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಈ ಮೂವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಆರೋಪಿಗಳು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು,ತಾರಿಕಂಬ್ಳ ಮತ್ತು ಶಾಂತಿಗುಡ್ಡೆ ಕಡೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದರು ಎಂಬುದು ಪೊಲೀಸ್ ಮೂಲಗಳು ತಿಳಿಸಿದೆ.
ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ರವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು,ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.