ಮಲೇರಿಯಾ ಮತ್ತು ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಕುಸುಮ ಚಂದ್ರಶೇಖರ್
Friday, July 26, 2024
ಹಳೆಯಂಗಡಿ:ನಿಂತ ನೀರಲ್ಲಿ ಸೊಳ್ಳೆ ಉತ್ಪತ್ತಿ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಮಲೇರಿಯಾ ಹಾಗೂ ಡೆಂಗ್ಯೂ ನಿಂದ ಮುಕ್ತರಾಗೋಣ ಎಂದು ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕುಸುಮ ಚಂದ್ರಶೇಖರ್ ಅವರು ವಿಧ್ಯಾರ್ಥಿಗಳಿಗೆ ಹೇಳಿದರು. ಗ್ರಾಮ ಪಂಚಾಯತ್ ಪಡುಪಣಂಬೂರು,ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು, ಕೆಮ್ರಾಲ್,ಮೂಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ ತಪೋವನ,ತೋಕೂರು ಹಾಗೂ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ)ತೋಕೂರು,ಹಳೆಯಂಗಡಿ. ಮತ್ತು ಇದರ ಸಂಯುಕ್ತ ಆಶ್ರಯದಲ್ಲಿ ಮೂಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ ತಪೋವನ ತೋಕೂರು ಇಲ್ಲಿ ನಡೆದ ಮಲೇರಿಯಾ ಮತ್ತು ಡೆಂಗ್ಯೂ ರೋಗದ ಬಗ್ಗೆ ಮಾಹಿತಿ ಹಾಗೂ ಜನ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮವು ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ,ನೆಹರು ಯುವ ಕೇಂದ್ರ,ಮಂಗಳೂರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮಂಗಳೂರು ದ.ಕ ಜಿಲ್ಲಾಡಳಿತ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ನಡೆಯಿತು. ಪಡುಪಣಂಬೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧೀರ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಅನ್ಸಿಲ ಪತ್ರಾವೋ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ,ತಪೋವನ, ತೋಕೂರು ಇದರ ಪ್ರಾಂಶುಪಾಲ ಹರಿ.ಎಚ್ ವಹಿಸಿದ್ದರು.ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು,ಕೆಮ್ರಾಲ್ ಇಲ್ಲಿನ ಆರೋಗ್ಯ ಸುರಕ್ಷಾ ಅಧಿಕಾರಿ ಮಾರ್ಗರೇಟ್ ಸುದರ್ಶಿನಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಪಡುಪಣಂಬೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಅಮೀನ್,ಸದಸ್ಯೆ ಶ್ರೀಮತಿ ಜ್ಯೋತಿ ಕುಲಾಲ್, ಕೈಗಾರಿಕಾ ತರಬೇತಿ ಕೇಂದ್ರದ ತರಬೇತಿ ಅಧಿಕಾರಿ ರಾಘವೇಂದ್ರ ಅಡಿಗ ಎನ್.ಎಲ್, ಕಛೇರಿ ಅಧೀಕ್ಷಕ ಹರಿಶ್ಚಂದ್ರ.ಎ,ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಾದ ಶ್ರೀಮತಿ ಲತಾ ಲೋಕೇಶ್,ಶ್ರೀಮತಿ ಯಶೋದ ದೇವಾಡಿಗ,ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು,ಹಳೆಯಂಗಡಿ ಇದರ ಅಧ್ಯಕ್ಷ ದೀಪಕ್ ಸುವರ್ಣ,ಜೊತೆ ಕಾರ್ಯದರ್ಶಿ,ಚಂದ್ರ ಸುವರ್ಣ,ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಗೀತಾ ಸದಾನಂದ ಶೆಟ್ಟಿಗಾರ್, ಪಡುಪಣಂಬೂರು ವ್ಯವಸಾಯಿಕ ಸೇವಾ ಸಹಕಾರಿ ಸಂಘ ನಿ.ಹಳೆಯಂಗಡಿ ಇದರ ನಿರ್ದೇಶಕ ಮುಕೇಶ್ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸುರಕ್ಷಾ ಅಧಿಕಾರಿ ಮಾರ್ಗರೇಟ್ ಸುದರ್ಶಿನಿ ಇವರು ಗಪ್ಪಿ ಮೀನುಗಳನ್ನು ಪ್ರಾಂಶುಪಾಲರಿಗೆ ವಿತರಿಸಿದರು. ವಿದ್ಯಾರ್ಥಿ ವಿಶ್ವ ಪ್ರಾರ್ಥಿಸಿದರು. ಪ್ರಾಂಶುಪಾಲ ಶ್ರೀ ಹರಿ.ಎಚ್ ಸ್ವಾಗತಿಸಿ,ಕಿರಿಯ ತರಬೇತಿ ಅಧಿಕಾರಿ ಸಚೇಂದ್ರ ಕಾರ್ಯಕ್ರಮ ನಿರೂಪಿಸಿದರು.ಸ್ಪೋರ್ಟ್ಸ್ ಕ್ಲಬ್ ನ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀಮತಿ ಗೀತಾ ಸದಾನಂದ ವಂದಿಸಿದರು.