ಕಿನ್ನಿಗೋಳಿ: ಯುಗಪುರುಷದ ಸಂಸ್ಥಾಪಕ ದಿ. ಕೊ. ಅ. ಉಡುಪ ಪ್ರಶಸ್ತಿ ಪ್ರದಾನ; ಸಾಧಕರಿಗೆ ಗೌರವ
ಕಿನ್ನಿಗೋಳಿ:: ಕಿನ್ನಿಗೋಳಿಯ ಯುಗಪುರುಷದ ಸಂಸ್ಥಾಪಕ ದಿ. ಕೊ. ಅ. ಉಡುಪ ಸಂಸ್ಮರಣಾ ಸಮಾರಂಭ, ಕೊ. ಅ. ಉಡುಪ ಪ್ರಶಸ್ತಿ ಪ್ರದಾನ, ವೇದವಿದ್ವಾಂಸರ ಸಂಮಾನ, ಕೃತಿ ಬಿಡುಗಡೆ ಸಮಾರಂಭ ಹಾಗೂ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರುರವರು ಅಧ್ಯಕ್ಷತೆ ವಹಿಸಿದ್ದರು
ಶ್ರೀಕ್ಷೇತ್ರ ಕಟೀಲಿನ ಪ್ರಧಾನ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿ ದಿ. ಕೊ. ಅ.ಉಡುಪರು ಆದರ್ಶ ಕೃಷಿಕರಾಗಿ, ಉತ್ತಮ ಗುರುಗಳಾಗಿ, ಸಾಂಸ್ಕೃತಿಕ ರಾಯಭಾರಿಯಾಗಿ, ಅಜಾತಶತ್ರು ವಾಗಿದ್ದು ಅವರ ಸಾಧನೆಗಳು ಕಾಲಕಾಲಕ್ಕೂ ಪ್ರಸ್ತುತ ಎಂದರು
ಸಮಾರಂಭದಲ್ಲಿ ಉಳೆಪಾಡಿ ದೇವಸ್ಥಾನದ ಧರ್ಮದರ್ಶಿ ಮೋಹನದಾಸ ಸುರತ್ಕಲ್ ರವರಿಗೆ ಕೊ. ಅ. ಉಡುಪ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು ಎಡಪದವು ರಾಧಾಕೃಷ್ಣ ತಂತ್ರಿ ರವರನ್ನು ಕಮಲಾಕ್ಷಿ ಉಡುಪ ಸ್ಮರಣಾರ್ಥ ವೇದ ವಿದ್ವಾಂಸರ ನೆಲೆಯಲ್ಲಿ ಗೌರವಿಸಲಾಯಿತು ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ ಎಂ.ವಿ.ಭಟ್ ರಚಿತ “ಆಧುನಿಕ ಭಾರತ” ಕೃತಿಯನ್ನು ದ.ಕ.ಜಿಲ್ಲಾ ಕ ಸಾ ಪ ಅಧ್ಯಕ್ಷ ಶ್ರೀನಾಥ ಎಂ.ಪಿ. ಇವರು ಬಿಡುಗಡೆಗೊಳಿಸಿದರು
ಮುಖ್ಯ ಅತಿಥಿಗಳಾಗಿ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಉದ್ಯಮಿ ಶ್ರೀಪತಿ ಭಟ್ ಮೂಡಬಿದ್ರೆ,ವಿರಾರ್ ಶಂಕರ್ ಶೆಟ್ಟಿ ಬಿಜೆಪಿ ನಾಯಕರಾದ ಕೆ ಪಿ ಸುದರ್ಶನ್, ಕಸ್ತೂರಿ ಪಂಜ, ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಉದ್ಯಮಿ ಪೃಥ್ವಿರಾಜ ಆಚಾರ್ಯ, ಬಾಲಕೃಷ್ಣ ಉಡುಪ ಉದ್ಯಮಿ.ಸುಧಾಕರ ಆಳ್ವ, ವರಿಷ್ಠ ಅಂಚೆಪಾಲಕ ಶ್ರೀನಾಥ್ ಬಸ್ರೂರು ಡಾ| ನಯನಾಭಿರಾಮ ಉಡುಪ ,ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಪು.ಗುರುಪ್ರಸಾದ್ ಭಟ್, ಅನುಷಾ ಕರ್ಕೇರಾ ಸನ್ಮಾನ ಪತ್ರ ವಾಚಿಸಿದರು
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ.ಜಿಲ್ಲೆಯ ಸಹಕಾರದೊಂದಿಗೆ ಕೆರೆಕಾಡು