ಜು. 15,ಕುಲವೂರು ಹಾಲು ಉತ್ಪಾದಕರ ಮಹಿಳಾ ಸಂಘದ ನೂತನ ಕಟ್ಟಡ ಉದ್ಘಾಟನೆ
Saturday, July 13, 2024
ಕೈಕಂಬ : ಮಂಗಳೂರು ತಾಲೂಕು ಕುಲವೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರ ನೂತನ ಕಟ್ಟಡ ಕ್ಷೀರಧಾರೆಯ ಉದ್ಘಾಟನಾ ಸಮಾರಂಭ ಸೋಮವಾರ ಬೆಳಿಗ್ಗೆ 10-00 ಗಂಟೆಗೆ
ನಡೆಯಲಿದೆ. ಮಂಗಳೂರು ಉತ್ತರ ಶಾಸಕ ಡಾ| ವೈ. ಭರತ್ ಶೆಟ್ಟಿ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಜಯರಾಮ ರೈ ಬಳಜ್ಜ ಕೆ.ಎಂ.ಎಫ್ ಬೆಂಗಳೂರು ಮತ್ತು ದ.ಕ. ಹಾ. ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.