ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ ನಿಧನ
Wednesday, July 17, 2024
ಮೂಲ್ಕಿ:ಮೂಲ್ಕಿಯ ಕರ್ನಿರೆ ನಿವಾಸಿ.ಹಿರಿಯ ಚಿತ್ರ ನಿರ್ಮಾಪಕ, ಲೇಖಕ, ರಂಗಕರ್ಮಿ ಸದಾನಂದ ಸುವರ್ಣ (92) ಅವರು ಮಂಗಳವಾರ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು.
ಮೂಲ್ಕಿ ಸಮೀಪದ ಕರ್ನಿರೆ ನಿವಾಸಿಯಾಗಿದ್ದ ಅವರು ಹಲವು ವರ್ಷಗಳ ಕಾಲ ಮುಂಬಯಿನಲ್ಲಿ ವಾಸವಾಗಿದ್ದರು. ಕನ್ನಡ ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸುವರ್ಣರು ಧರ್ಮಚಕ್ರ, ಸುಳಿ, ಡೊಂಕುಬಾಲದ ನಾಯಕರು, ಕೋರ್ಟ್ ಮಾರ್ಷಲ್, ಉರುಳು ಮತ್ತಿತರ ಜನಪ್ರಿಯ ನಾಟಕ ರಚನೆಮಾಡಿದ ಹೆಗ್ಗಳಿಕೆ ಇವರದ್ದು. ಅವರ ಗುಡ್ಡೆದ ಭೂತ ಧಾರವಾಹಿ ದೂರದರ್ಶನದಲ್ಲಿ ಬಹಳ ಜನಮೆಚ್ಚುಗೆ ಗಳಿಸಿತ್ತು, ಅವರ ಘಟಶ್ರಾದ್ದ ಸಿನಿಮಾಕ್ಕೆ ಸ್ವರ್ಣಕಮಲ ಪ್ರಶಸ್ತಿ ಸಿಕ್ಕಿರುತ್ತದೆ. ಮಂಗಳೂರಿನ ಹವ್ಯಾಸಿ ರಂಗಭೂಮಿಗೆ ಹೊಸ ಸ್ಪರ್ಶ ನೀಡಿದವರು ಸದಾನಂದ ಸುವರ್ಣರು.. ಮೃತರು ಅವಿವಾಹಿತರಾಗಿದ್ದು ಅವರ ನಿಧನಕ್ಕೆ ಶಾಸಕ ಉಮಾನಾಥ ಕೋಟ್ಯಾನ್.ಮಾಜಿ ಸಚಿವ ಕೆ ಅಭಯ ಚಂದ್ರ ಜೈನ್. ಧರ್ಮದರ್ಶಿ ಹರಿಕೃಷ್ಣ ಪುನರೂರು. ಅಂತರರಾಷ್ಟ್ರೀಯ ವಾಸ್ತು ತಜ್ಞರು. ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರ ಶೇಖರ ಸ್ವಾಮೀಜಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ