-->


ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ



ಕುಳಾಯಿ: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ  ನಿರ್ಮಾಣಗೊಳ್ಳುತ್ತಿಸರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಅರ್ಪಿಸಿದರು.

ಉತ್ತರದ  ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ.
ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ.ಸಮುದ್ರದ  ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ  ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
 ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article